ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ | ಪ್ರವಾಹ ಮತ್ತು ಭೂಕುಸಿತದಿಂದ ತೀವ್ರ ಪರಿಣಾಮ

July 4, 2025
9:22 PM

ಹಿಮಾಚಲ ಪ್ರದೇಶದಲ್ಲಿ ಮಾನ್ಸೂನ್ ಆಗಮನದ ನಂತರ, ಭಾರೀ ಮಳೆಯಾಗುತ್ತಿದ್ದು, ಪ್ರವಾಹ ಮತ್ತು ಭೂಕುಸಿತದ ಘಟನೆಗಳಿಂದಾಗಿ ರಾಜ್ಯದ ಹಲವಾರು ಭಾಗಗಳಲ್ಲಿ ಜನ ಜೀವನದ ಮೇಲೆ ತೀವ್ರ ಪರಿಣಾಮ ಬೀರಿವೆ. ಇದೇ  9 ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisement
Advertisement

ಕಳೆದ 24 ಗಂಟೆಗಳಲ್ಲಿ ಸಿರ್ಮೌರ್ ಜಿಲ್ಲೆಯ ಪಚ್ಚಾದ್‌ನಲ್ಲಿ ಅತಿ ಹೆಚ್ಚು 133 ಮಿಲಿಮೀಟರ್ ಮಳೆಯಾಗಿದೆ. ಇದಲ್ಲದೆ, ಹಮೀರ್‌ಪುರ ಜಿಲ್ಲೆಯ ಬರ್ಸರ್‌ನಲ್ಲಿ 92 ಮಿಲಿಮೀಟರ್, ರಾಜಧಾನಿ ಶಿಮ್ಲಾ ಬಳಿಯ ಜುಬ್ಬರ್‌ಹಟ್ಟಿಯಲ್ಲಿ 59 ಮತ್ತು ಉನಾ ಜಿಲ್ಲೆಯಲ್ಲಿ 55 ಮಿಲಿಮೀಟರ್ ಮಳೆಯಾಗಿದೆ. ಈ ನಡವೆ, ರಾಜ್ಯಾದ್ಯಂತ 246 ರಸ್ತೆಗಳಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. 404 ವಿದ್ಯುತ್ ಪರಿವರ್ತಕಗಳು ಮತ್ತು 784 ಕುಡಿಯುವ ನೀರು ಸರಬರಾಜು ಯೋಜನೆಗಳು ಬಾಧಿತವಾಗಿದ್ದು, ಸಾರ್ವಜನಿಕರಿಗೆ ನೀರು ಮತ್ತು ವಿದ್ಯುತ್ ಕೊರತೆ ಉಂಟಾಗಿದೆ. ಇಲ್ಲಿಯವರೆಗೆ, ಮಳೆ ಸಂಬಂಧಿತ ಘಟನೆಗಳಲ್ಲಿ 69 ಜನರು ಪ್ರಾಣ ಕಳೆದುಕೊಂಡಿದ್ದಾರೆ, 110 ಜನರು ಗಾಯಗೊಂಡಿದ್ದಾರೆ ಮತ್ತು 37 ಜನರು ಇನ್ನೂ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಜುಲೈ 9 ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಜನರು ನದಿಗಳು ಮತ್ತು ತೊರೆಗಳಿಂದ ದೂರವಿರಲು, ಅನಗತ್ಯ ಪ್ರಯಾಣವನ್ನು ತಪ್ಪಿಸಲು ಮತ್ತು ಆಡಳಿತವು ನೀಡಿದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಹವಮಾನ ಇಲಾಖೆ ತಿಳಿಸಿದೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ
January 29, 2026
2:18 PM
by: ದ ರೂರಲ್ ಮಿರರ್.ಕಾಂ
ಕೊಳೆ ರೋಗ ನಿಯಂತ್ರಣಕ್ಕೂ ತೆರಿಗೆ…? ಮೈಲುತುತ್ತಿಗೆ ಸುಂಕ – ಅಡಿಕೆ ರೈತನಿಗೆ ಮತ್ತೊಂದು ಹೊರೆ..!
January 29, 2026
7:39 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ
January 29, 2026
7:18 AM
by: ದ ರೂರಲ್ ಮಿರರ್.ಕಾಂ
ಯೂರಿಯಾ ಮಾರಾಟ 3.8% ಏರಿಕೆ | ದೇಶೀಯ ಉತ್ಪಾದನೆ ಕುಸಿತ, ಆಮದು 85% ಹೆಚ್ಚಳ
January 29, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror