#HeavyRain | ಧಾರಾಕಾರ ಮಳೆಗೆ ಗ್ರಾಮೀಣ ಭಾಗವೂ ತತ್ತರ… | ಸಂಕಷ್ಟದಲ್ಲಿ ಸಂಚಾರ |

July 23, 2023
11:55 AM
ಸುಳ್ಯ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಬಹುತೇಕ ಹೊಳೆ, ನದಿಗಳು ತುಂಬಿ ಹರಿಯುತ್ತಿದೆ. ಸಂಚಾರ ಸಂಕಷ್ಟದಲ್ಲಿದೆ.

ಸುಳ್ಯ  ತಾಲೂಕಿನಲ್ಲಿ ಮತ್ತೆ ಧಾರಾಕಾರ ಮಳೆ ಮುಂದುವರಿದಿದೆ. ಗ್ರಾಮೀಣ ಭಾಗಗಳು ತತ್ತರಗೊಂಡಿವೆ. ಹಲವು ಹೊಳೆ, ನದಿಗಳು ಉಕ್ಕಿ ಹರಿಯುತ್ತಿರುವ ಕಾರಣದಿಂದ ಸೇತುವೆಗಳು ಬ್ಲಾಕ್‌ ಆಗಿವೆ. ಸಂಚಾರ ಸಂಕಷ್ಟದಲ್ಲಿದೆ. ಸುಳ್ಯ ತಾಲೂಕಿನ ಕೊಲ್ಲಮೊಗ್ರ, ಬಾಳುಗೋಡು ಮೊದಲಾದ ಪ್ರದೇಶಗಳಲ್ಲಿ ಮಳೆಯ ಅಬ್ಬರ ಹೆಚ್ಚಿದೆ. 

ಕೊಲ್ಲಮೊಗ್ರ ಪ್ರದೇಶದಲ್ಲಿ ಮಳೆ | Photo Credit : Udaya Shivala

ಕುಕ್ಕೆ ಸುಬ್ರಹ್ಮಣ್ಯದ ಸ್ನಾನ ಘಟ್ಟ ಮುಳುಗಡೆ ಮುಂದುವರಿದಿದೆ. ಸುಬ್ರಹ್ಮಣ್ಯ-ಪುತ್ತೂರು ಸಂಪರ್ಕ ರಸ್ತೆ ಸೇರಿದಂತೆ ಗ್ರಾಮೀಣ ರಸ್ತೆಗಳಲ್ಲೂ ನೀರು ತುಂಬಿ ಸಂಚಾರ ಸಂಕಷ್ಟದಲ್ಲಿದೆ. ಸುಳ್ಯದ ಕೊಲ್ಲಮೊಗ್ರ , ಹರಿಹರ ಪ್ರದೇಶಗಳಲ್ಲೂ ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಹೊಳೆ ತುಂಬಿ ಹರಿಯುತ್ತಿದೆ. ಕಳೆದ ವರ್ಷದ ಭಾರೀ ಮಳೆಯ ಕಾರಣದಿಂದ ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿತ್ತು. ಇದೀಗ ಭಾರೀ ಮಳೆ ಎರಡು ದಿನಗಳಿಂದ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರಿಗೆ ಆತಂಕ ಉಂಟಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ
August 13, 2026
6:35 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror