Karnataka Weather | 21-06-2024 | ಇಂದು ಸಾಮಾನ್ಯ ಮಳೆ | ಜೂ. 22 ರಿಂದ 24 ವರೆಗೆ ಉತ್ತಮ ಮಳೆ |

June 21, 2024
11:45 AM
ಜೂನ್ 22 ರಿಂದ 24ರ ತನಕ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.

22.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮಧ್ಯಾಹ್ನ ನಂತರ ಸ್ವಲ್ಪ ಜಾಸ್ತಿ ಇರಬಹುದು. ಉತ್ತರ ಕನ್ನಡ ಕರಾವಳಿ ತೀರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದ್ದು ಉಳಿದ ಭಾಗಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.

ಕೊಡಗು ಅಲ್ಲಲ್ಲಿ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ, ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮೈಸೂರು ಮತ್ತು ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ಜೂನ್ 22 ರಿಂದ 24ರ ತನಕ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ನಂತರ ಜೂನ್ 28ರ ತನಕವೂ ಉತ್ತಮ ಮಳೆಯ ಮುನ್ಸೂಚನೆ ಇದೆ. ಜೂನ್ 29ರಿಂದ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗುವ ಲಕ್ಷಣಗಳಿವೆ. ರಾಜ್ಯದ ಒಳನಾಡು ಭಾಗಗಳಲ್ಲಿಯೂ ಜೂನ್ 28ರ ತನಕ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

– Weather forecast predicts heavy rain from June 22 to 24

– Certain regions will experience periods of heavy rain

– Importance of staying informed and prepared for potential severe weather events

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?
September 12, 2026
7:08 AM
by: ದ ರೂರಲ್ ಮಿರರ್.ಕಾಂ
ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?
September 11, 2026
8:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror