#HeavyRain | ನಿರಂತರ ಮಳೆಗೆ ತುಂಬಿ ಹರಿಯುವ ನದಿಗಳು | ಮುಂದುವರಿದ ಭಾರೀ ಮಳೆ | ಸೇತುವೆಗಳು ಬ್ಲಾಕ್‌ – ಸಂಚಾರಕ್ಕೆ ಅಡ್ಡಿ | ಕುಮಾರಧಾರಾ ಸ್ನಾನ ಘಟ್ಟ ಮತ್ತೆ ಮುಳುಗಡೆ |

July 23, 2023
9:43 AM
ಸುಳ್ಯ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಭಾರೀ ಮಳೆ ಮುಂದುವರಿದಿದೆ. ಗ್ರಾಮೀಣ ಭಾಗದಲ್ಲಿ ನದಿಗಳು ತುಂಬಿ ಹರಿಯುತ್ತಿದೆ. ಪಂಜ-ಸುಬ್ರಹ್ಮಣ್ಯ ರಸ್ತೆಯ ಮೇಲೆ ನೀರು ಹರಿದು ಸಂಚಾರ ಸ್ಥಗಿತವಾಗಿದೆ. ಕುಮಾರಧಾರಾ ಸ್ನಾನಘಟ್ಟ ಮುಳುಗಡೆಯಾಗಿದೆ. ಕೃಷಿ ತೋಟಗಳಿಗೆ ನೀರು ನುಗ್ಗಿದೆ.

ಸುಳ್ಯ , ಪುತ್ತೂರು ಸೇರಿದಂತೆ ಮಲೆನಾಡು ಭಾಗಗಳಲ್ಲಿ  ಭಾರೀ ಮಳೆ ಮುಂದುವರಿದಿದೆ. ಎರಡು ದಿನಗಳ ಮಳೆಗೆ ನದಿಗಳು ತುಂಬಿ ಹರಿಯುತ್ತಿದೆ. ಕುಕ್ಕೆ ಸುಬ್ರಹ್ಮಣ್ಯದ ಸ್ನಾನ ಘಟ್ಟ ಮುಳುಗಡೆಯಾಗಿದೆ. ಸುಬ್ರಹ್ಮಣ್ಯ-ಪುತ್ತೂರು ಸಂಪರ್ಕ ರಸ್ತೆಯ ಪಂಜದ ಹೊಳೆ ತುಂಬಿ ಹರಿದು ಸೇತುವೆ ಮೇಲೆ ನೀರು ಹರಿಯುವ ಕಾರಣ ವಾಹನ ಸಂಚಾರ ಸ್ಥಗಿತವಾಗಿದೆ. ಘಟ್ಟ ಪ್ರದೇಶದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ.

ಮುಳುಗಿರುವ ಸುಬ್ರಹ್ಮಣ್ಯ-ಪಂಜ ರಸ್ತೆಸುಳ್ಯದ ಕೊಲ್ಲಮೊಗ್ರ , ಹರಿಹರ ಪ್ರದೇಶಗಳಲ್ಲೂ ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಹೊಳೆ ತುಂಬಿ ಹರಿಯುತ್ತಿದೆ. ಕಳೆದ ವರ್ಷದ ಭಾರೀ ಮಳೆಯ ಕಾರಣದಿಂದ ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿತ್ತು. ಇದೀಗ ಭಾರೀ ಮಳೆ ಎರಡು ದಿನಗಳಿಂದ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರಿಗೆ ಆತಂಕ ಉಂಟಾಗಿದೆ.

ಸುಳ್ಯದ ಸಂಪಾಜೆ, ಚೆಂಬು ಪ್ರದೇಶದಲ್ಲೂ ಭಾರೀ ಮಳೆಯಾಗಿದ್ದು, ನಿನ್ನೆ ರಾತ್ರಿ ರಸ್ತೆಗೆ ಮರ ಬಿದ್ದ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಸದ್ಯ ವಾಹನ ಸಂಚಾರಕ್ಕೆ ಅನುವು ಇದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಘಾಟಿ ಪ್ರದೇಶದ ರಸ್ತೆಗಳು ಕುಸಿತವಾಗುವ ಆತಂಕ ಇದೆ. ಇಂದೂ ಕೂಡಾ ನಿರಂತರ ಮಳೆಯಾದರೆ ಕುಸಿತದ ಆತಂಕ ಇದೆ.

ಕುಮಾರಧಾರಾ ಸ್ನಾನಘಟ್ಟ ಮುಳುಗಡೆ | Photo Credit : Shiva Bhat

ಕುಕ್ಕೆ ಸುಬ್ರಹ್ಮಣ್ಯದಲ್ಲೂ ಭಾರೀ ಮಳೆಯಾಗುತ್ತಿದೆ. ಘಟ್ಟ ಪ್ರದೇಶದಿಂದ ಭಾರೀ ಪ್ರಮಾಣದಲ್ಲಿ ಹರಿದು  ನೀರು ಬರುತ್ತಿರುವ  ಹಿನ್ನೆಲೆಯಲ್ಲಿ ಕುಮಾರಧಾರಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ನದಿ ಬದಿಗೆ ಹೋಗದಂತೆ ದೇವಾಲಯದ ಭಕ್ತರಿಗೆ ಸೂಚನೆ ನೀಡಲಾಗಿದೆ. ಪೊಲೀಸರು, ಗೃಹರಕ್ಷಕ ದಳದಿಂದ ಸ್ನಾನ ಘಟ್ಟ ಬಳಿ ಎಚ್ಚರಿಕೆ ನೀಡುತ್ತಿದ್ದಾರೆ.ಕುಮಾರಧಾರ ನೀರು ಹೆಚ್ಚಳವಾಗಿ ಸುಬ್ರಹ್ಮಣ್ಯ-ಮಂಜೇಶ್ವರ ಹೆದ್ದಾರಿ ಬಂದ್ ಆಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror