ಸುಳ್ಯ , ಪುತ್ತೂರು ಸೇರಿದಂತೆ ಮಲೆನಾಡು ಭಾಗಗಳಲ್ಲಿ ಭಾರೀ ಮಳೆ ಮುಂದುವರಿದಿದೆ. ಎರಡು ದಿನಗಳ ಮಳೆಗೆ ನದಿಗಳು ತುಂಬಿ ಹರಿಯುತ್ತಿದೆ. ಕುಕ್ಕೆ ಸುಬ್ರಹ್ಮಣ್ಯದ ಸ್ನಾನ ಘಟ್ಟ ಮುಳುಗಡೆಯಾಗಿದೆ. ಸುಬ್ರಹ್ಮಣ್ಯ-ಪುತ್ತೂರು ಸಂಪರ್ಕ ರಸ್ತೆಯ ಪಂಜದ ಹೊಳೆ ತುಂಬಿ ಹರಿದು ಸೇತುವೆ ಮೇಲೆ ನೀರು ಹರಿಯುವ ಕಾರಣ ವಾಹನ ಸಂಚಾರ ಸ್ಥಗಿತವಾಗಿದೆ. ಘಟ್ಟ ಪ್ರದೇಶದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ.
ಮುಳುಗಿರುವ ಸುಬ್ರಹ್ಮಣ್ಯ-ಪಂಜ ರಸ್ತೆಸುಳ್ಯದ ಕೊಲ್ಲಮೊಗ್ರ , ಹರಿಹರ ಪ್ರದೇಶಗಳಲ್ಲೂ ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಹೊಳೆ ತುಂಬಿ ಹರಿಯುತ್ತಿದೆ. ಕಳೆದ ವರ್ಷದ ಭಾರೀ ಮಳೆಯ ಕಾರಣದಿಂದ ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿತ್ತು. ಇದೀಗ ಭಾರೀ ಮಳೆ ಎರಡು ದಿನಗಳಿಂದ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರಿಗೆ ಆತಂಕ ಉಂಟಾಗಿದೆ.
ಸುಳ್ಯದ ಸಂಪಾಜೆ, ಚೆಂಬು ಪ್ರದೇಶದಲ್ಲೂ ಭಾರೀ ಮಳೆಯಾಗಿದ್ದು, ನಿನ್ನೆ ರಾತ್ರಿ ರಸ್ತೆಗೆ ಮರ ಬಿದ್ದ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಸದ್ಯ ವಾಹನ ಸಂಚಾರಕ್ಕೆ ಅನುವು ಇದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಘಾಟಿ ಪ್ರದೇಶದ ರಸ್ತೆಗಳು ಕುಸಿತವಾಗುವ ಆತಂಕ ಇದೆ. ಇಂದೂ ಕೂಡಾ ನಿರಂತರ ಮಳೆಯಾದರೆ ಕುಸಿತದ ಆತಂಕ ಇದೆ.
ಕುಕ್ಕೆ ಸುಬ್ರಹ್ಮಣ್ಯದಲ್ಲೂ ಭಾರೀ ಮಳೆಯಾಗುತ್ತಿದೆ. ಘಟ್ಟ ಪ್ರದೇಶದಿಂದ ಭಾರೀ ಪ್ರಮಾಣದಲ್ಲಿ ಹರಿದು ನೀರು ಬರುತ್ತಿರುವ ಹಿನ್ನೆಲೆಯಲ್ಲಿ ಕುಮಾರಧಾರಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ನದಿ ಬದಿಗೆ ಹೋಗದಂತೆ ದೇವಾಲಯದ ಭಕ್ತರಿಗೆ ಸೂಚನೆ ನೀಡಲಾಗಿದೆ. ಪೊಲೀಸರು, ಗೃಹರಕ್ಷಕ ದಳದಿಂದ ಸ್ನಾನ ಘಟ್ಟ ಬಳಿ ಎಚ್ಚರಿಕೆ ನೀಡುತ್ತಿದ್ದಾರೆ.ಕುಮಾರಧಾರ ನೀರು ಹೆಚ್ಚಳವಾಗಿ ಸುಬ್ರಹ್ಮಣ್ಯ-ಮಂಜೇಶ್ವರ ಹೆದ್ದಾರಿ ಬಂದ್ ಆಗಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…