#HeavyRain | ಸುಳ್ಯದಲ್ಲಿ ಮುಂದುವರಿದ ಭಾರೀ ಮಳೆ | ಕೆಲವು ಶಾಲೆಗಳಿಗೆ ರಜೆ ಘೋಷಣೆ |

July 24, 2023
7:28 AM
ಸುಳ್ಯ ತಾಲೂಕಿನಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಪರಿಸ್ಥಿತಿ ಅವಲೋಕಿಸಿ ಶಾಲೆಗೆ ರಜೆ ನೀಡಲು ಆಯಾ ತಾಲೂಕಿನ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದ್ದರು. ಸುಳ್ಯ ತಾಲೂಕಿನ ಹರಿಹರ ಕ್ಲಸ್ಟರ್‌ ನ ಬಹುತೇಕ ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಬಿಇಒ ಕಚೇರಿ ಪ್ರಕಟಣೆ ತಿಳಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಭಾನುವಾರ ರಾತ್ರಿಯಿಂದಲೇ ಧಾರಾಕಾರ ಮಳೆ ಸುರಿಯುತ್ತಿದೆ. ಹೊಳೆ, ನದಿಗಳು ತುಂಬಿ ಹರಿಯುತ್ತಿದೆ. ಮಳೆಯ ಹಿನ್ನೆಲೆಯಲ್ಲಿ ಹರಿಹರ ಕ್ಲಸ್ಟರ್‌ ನ ಬಹುತೇಕ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಸುಳ್ಯ ಬಿಇಒ ಪ್ರಕಟಣೆ ತಿಳಿಸಿದೆ.

ಮಳೆಯಿಂದ ಗ್ರಾಮೀಣ ಭಾಗದಲ್ಲೂ ಹೊಳೆ, ಹಳ್ಳಗಳು ತುಂಬಿ ಹರಿಯುತ್ತಿದ್ದು , ಶಾಲಾ ಮಕ್ಕಳು ಹೊಳೆ ದಾಟುವುದು, ಕಿರುಸಂಕದ ಮೇಲೆ ನಡೆದಾಡುವುದು ಅಪಾಯಕಾರಿಯಾಗಿದೆ. ಬಹುತೇಕ ಗ್ರಾಮೀಣ ಭಾಗಗಳಲ್ಲಿ ಪಾಲ, ಕಿರು ಸಂಕ ದಾಟಿ ಮಕ್ಕಳು ಶಾಲೆಗೆ ಬರಬೇಕಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮಗಳು ಅಗತ್ಯವಾಗಿದೆ.ಇದಕ್ಕಾಗಿ ಭಾರೀ ಮಳೆಯ ಸಂದರ್ಭ ಶಾಲೆಗಳಿಗೆ ರಜೆ ಅನಿವಾರ್ಯವಾಗಿದೆ.(ಈಗಿನ ವಾತಾವರಣದ ಟ್ವೀಟ್‌ ವಿಡಿಯೋ ಇಲ್ಲಿದೆ..)

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ
October 7, 2026
11:35 PM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ
October 7, 2026
11:22 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?
October 7, 2026
12:40 PM
by: ಸಾಯಿಶೇಖರ್ ಕರಿಕಳ
ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ
October 7, 2026
7:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror