ಏಪ್ರಿಲ್ 3 ಹಾಗೂ 4 ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ | ಎಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

March 31, 2025
11:40 PM
ಏಪ್ರಿಲ್  3  ಹಾಗೂ 4  ರಂದು ಕರಾವಳಿ ಹಾಗೂ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಗುರ ಮಳೆಯಾಗಿದ್ದು, ಪ್ರಮುಖವಾಗಿ ಧಾರವಾಡದಲ್ಲಿ 2 ಸೆಂಟಿಮೀಟರ್ ಮಳೆಯಾಗಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32  ಡಿಗ್ರಿ ಸೆಲ್ಸಿಯಸ್ ಹಾಗೂ ಕಲಬುರಿಗಿಯಲ್ಲಿ 41 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಮುಂದಿನ ಮೂರು ದಿನಗಳು ರಾಜ್ಯದ ಕೆಲವೆಡೆ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಏಪ್ರಿಲ್  3  ಹಾಗೂ 4  ರಂದು ಕರಾವಳಿ ಹಾಗೂ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ.……..ಮುಂದೆ ಓದಿ…..

ಬೆಂಗಳೂರು ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ್  ಮಾಹಿತಿ ನೀಡಿ, ರಾಜ್ಯದ ಹಲವೆಡೆ ಗುಡುಗು-ಮಿಚು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರಕನ್ನಡ, ದಕ್ಷಿಣಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಏಪ್ರಿಲ್ 3 ಹಾಗೂ 4 ರಂದು ಈ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಆ ದಿನಗಳಂದು ಕೆಲವೆಡೆ ಆಲಿಕಲ್ಲು ಮಳೆಯಾಗುವ ಸಂಭವವಿದೆ.  ರಾಜ್ಯಾದ್ಯಂತ ಏಪ್ರಿಲ್ 2 ರಿಂದ 5 ರವರೆಗೆ ಉಷ್ಣತೆ ಮೂರರಿಂದ ನಾಲ್ಕು ಡಿಗ್ರಿ ಸೆಲ್ಸಿಯಸ್ ಇಳಿಮುಖವಾಗುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದ್ದಾರೆ.

 

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ
January 10, 2026
10:35 PM
by: ರೂರಲ್‌ ಮಿರರ್ ಸುದ್ದಿಜಾಲ
ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..
January 10, 2026
10:33 PM
by: ರೂರಲ್‌ ಮಿರರ್ ಸುದ್ದಿಜಾಲ
ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ
January 10, 2026
10:30 PM
by: ರೂರಲ್‌ ಮಿರರ್ ಸುದ್ದಿಜಾಲ
ಸ್ವಾವಲಂಬಿ ಸಾರಥಿ ಯೋಜನೆ | ಆಟೋ ಗೂಡ್ಸ್ ವಾಹನ ಖರೀದಿಗೆ ರೂ.4 ಲಕ್ಷ ಸಹಾಯಧನ
January 10, 2026
10:28 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror