ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಗುರ ಮಳೆಯಾಗಿದ್ದು, ಪ್ರಮುಖವಾಗಿ ಧಾರವಾಡದಲ್ಲಿ 2 ಸೆಂಟಿಮೀಟರ್ ಮಳೆಯಾಗಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಹಾಗೂ ಕಲಬುರಿಗಿಯಲ್ಲಿ 41 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಮುಂದಿನ ಮೂರು ದಿನಗಳು ರಾಜ್ಯದ ಕೆಲವೆಡೆ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಏಪ್ರಿಲ್ 3 ಹಾಗೂ 4 ರಂದು ಕರಾವಳಿ ಹಾಗೂ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ.……..ಮುಂದೆ ಓದಿ…..
ಬೆಂಗಳೂರು ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ್ ಮಾಹಿತಿ ನೀಡಿ, ರಾಜ್ಯದ ಹಲವೆಡೆ ಗುಡುಗು-ಮಿಚು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರಕನ್ನಡ, ದಕ್ಷಿಣಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಏಪ್ರಿಲ್ 3 ಹಾಗೂ 4 ರಂದು ಈ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಆ ದಿನಗಳಂದು ಕೆಲವೆಡೆ ಆಲಿಕಲ್ಲು ಮಳೆಯಾಗುವ ಸಂಭವವಿದೆ. ರಾಜ್ಯಾದ್ಯಂತ ಏಪ್ರಿಲ್ 2 ರಿಂದ 5 ರವರೆಗೆ ಉಷ್ಣತೆ ಮೂರರಿಂದ ನಾಲ್ಕು ಡಿಗ್ರಿ ಸೆಲ್ಸಿಯಸ್ ಇಳಿಮುಖವಾಗುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದ್ದಾರೆ.
ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…
ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…
ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದ್ದು,…
ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…
ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ ಸುಮಾರು…