ನಿರಂತರವಾಗಿ ಭಾರೀ ಮಳೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಡ್ ಘೋಷಣೆಯಾಗಿದ್ದು, ಹೆಚ್ಚಿನ ಮಳೆಯಾಗುವ ಸೂಚನೆಯಿರುವುದರಿಂದ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ಜು. 8 ಹಾಗೂ 9 ರಂದು ಎರಡು ದಿನಗಳ ರಜೆ ಘೋಷಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು, ಹವಾಮಾನ ಇಲಾಖೆಯು ಮುಂದಿನ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲೆ, ಕಾಲೇಜುಗಳು, ಸ್ನಾತಕೋತ್ತರ ಪದವಿ, ಐಟಿಐ ಸಂಸ್ಥೆಗಳಿಗೆ ಜು.8 ಹಾಗೂ 9 ರಂದು ಎರಡು ದಿನಗಳ ಕಾಲ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಆದೇಶಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಎಲ್ಲಾ ಶಾಲೆ, ಕಾಲೇಜುಗಳು, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್, ಐಟಿಐ ಸಂಸ್ಥೆಗಳಿಗೆ ಜು.8 ಹಾಗೂ 9 ರಂದು ಎರಡು ದಿನಗಳ ಕಾಲ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ. #ಮಳೆ #rain #Karnatakarains pic.twitter.com/jfs7Umzbhl
Advertisement— theruralmirror (@ruralmirror) July 7, 2022