ಮುಂಗಾರು ಚುರುಕಾಗಿದೆ. ಇದೀಗ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮುಂದಿನ 3 ಗಂಟೆಗಳಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಮೂರು ಜಿಲ್ಲೆಗಳಿಗೂ ರೆಡ್ ಎಲರ್ಟ್ ಘೋಷಣೆ ಮಾಡಿದೆ.
ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಭಾರೀ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.#MangaloreRains #Karnatakarains#RedAlert pic.twitter.com/t0tQWgcRl5
— theruralmirror (@ruralmirror) July 4, 2023
ಇದರ ಜೊತೆಗೆ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ರಾಯಚೂರು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಿಗೆ ಎಲ್ಲೋ ಎಲರ್ಟ್ ಘೋಷಣೆ ಮಾಡಲಾಗಿದೆ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 4 ದಿನಗಳ ಕಾಲ ಉತ್ತಮ ಮಳೆಯಾಗಲಿದೆ. ಈಗಿನ ಅಂದಾಜು ಪ್ರಕಾರ 120 ಮಿಮೀ ಮಳೆಯಿಂದ 200 ಮಿಮೀವರೆಗೂ ಮಳೆಯಾಗುವ ಸಾಧ್ಯತೆ ಇದೆ. ಇದೇ ವೇಳೆ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಿಂದ ಎಚ್ಚರಿಕೆ ನೀಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಸಲಾಗಿದೆ.
