#RedAlert | ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ | 3 ಜಿಲ್ಲೆಗಳಿಗೆ ರೆಡ್‌ ಎಲರ್ಟ್‌ |

July 4, 2023
7:19 PM
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ  ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಹೀಗಾಗಿ ಈ ಜಿಲ್ಲೆಗಳಿಗೆ ರೆಡ್‌ ಎಲರ್ಟ್‌ ಘೋಷಣೆ ಮಾಡಿದೆ.

ಮುಂಗಾರು ಚುರುಕಾಗಿದೆ. ಇದೀಗ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮುಂದಿನ 3 ಗಂಟೆಗಳಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ  ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಮೂರು ಜಿಲ್ಲೆಗಳಿಗೂ ರೆಡ್‌ ಎಲರ್ಟ್‌ ಘೋಷಣೆ ಮಾಡಿದೆ.

ಇದರ ಜೊತೆಗೆ   ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ ಹಾಗೂ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ರಾಯಚೂರು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಿಗೆ ಎಲ್ಲೋ ಎಲರ್ಟ್‌ ಘೋಷಣೆ ಮಾಡಲಾಗಿದೆ.

ಕರಾವಳಿ ಕರ್ನಾಟಕದಲ್ಲಿ ಮುಂದಿನ 4 ದಿನಗಳ ಕಾಲ ಉತ್ತಮ ಮಳೆಯಾಗಲಿದೆ. ಈಗಿನ ಅಂದಾಜು ಪ್ರಕಾರ 120 ಮಿಮೀ ಮಳೆಯಿಂದ 200 ಮಿಮೀವರೆಗೂ ಮಳೆಯಾಗುವ ಸಾಧ್ಯತೆ ಇದೆ. ಇದೇ ವೇಳೆ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಿಂದ ಎಚ್ಚರಿಕೆ ನೀಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಸಲಾಗಿದೆ.

ಉಡುಪಿ ಜಿಲ್ಲಾಧಿಕಾರಿಗಳಿಂದ ಪ್ರಕಟಣೆ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?
October 7, 2026
12:40 PM
by: ಸಾಯಿಶೇಖರ್ ಕರಿಕಳ
ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ
October 7, 2026
7:02 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ
October 7, 2026
6:55 AM
by: ದ ರೂರಲ್ ಮಿರರ್.ಕಾಂ
ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು
October 7, 2026
6:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror