Advertisement
MIRROR FOCUS

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

Share

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮಲೆನಾಡಿನ ತಪ್ಪಲು ಪ್ರದೇಶ ಸೇರಿದಂತೆ ವಿವಿಧೆಡೆ ಬುಧವಾರ ಬೆಳಗ್ಗಿನಿಂದ ಮೋಡ ಮುಸುಕಿದ ವಾತಾವರಣದ ನಡುವೆ ಭಾರೀ ಮಳೆಯಾಗುತ್ತಿದೆ.

ನಿನ್ನೆ ರಾತ್ರಿಯಿಂದಲೇ ಆರಂಭವಾದ ಮಳೆ ಬುಧವಾರ ಬೆಳಗ್ಗೆಯೂ ಮುಂದುವರಿದಿದ್ದು, ಕಳೆದ ಎರಡು ದಿನಗಳಿಂದ ತುಸು ಕಡಿಮೆಯಾಗಿದ್ದ ಮಳೆ ಮತ್ತೆ ಚುರುಕುಗೊಂಡಿದೆ. ನಿರಂತರ ಮೋಡ ಕವಿದ ವಾತಾವರಣದಿಂದ ದಿನವಿಡೀ ಮಳೆ ಮುಂದುವರಿಯುವ ಸಾಧ್ಯತೆ ಇದೆ.

ಮಂಗಳವಾರ ಜಿಲ್ಲೆಯ ಹಲವು ಭಾಗಗಳಲ್ಲಿ 40 ರಿಂದ 50 ಮಿಲಿಮೀಟರ್‌ವರೆಗೆ ಮಳೆಯಾಗಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ಹರಿಯತೊಡಗಿದೆ. ಮಲೆನಾಡಿನ ಪ್ರದೇಶಗಳಲ್ಲಿ ಕೃಷಿ ಚಟುವಟಿಕೆಗಳಿಗೆ ಮಳೆ ಅನುಕೂಲಕರವಾಗಿದ್ದರೂ, ನಿರಂತರ ಮಳೆಯ ಹಿನ್ನೆಲೆಯಲ್ಲಿ ಗುಡ್ಡ ಪ್ರದೇಶಗಳಲ್ಲಿ ಎಚ್ಚರಿಕೆ ವಹಿಸುವಂತೆ ಸ್ಥಳೀಯರು ಸೂಚಿಸಿದ್ದಾರೆ.

ಸುಳ್ಯದ ಕಲ್ಲಾಜೆಯಲ್ಲಿ ಮಳೆಯ ವಾತಾವರಣ – ಚಿತ್ರ – ಸಿಜೋ, ಕಲ್ಲಾಜೆ

ಹವಾಮಾನ ಬದಲಾವಣೆಯಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.

ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

Heavy rainfall has resumed across the foothill regions of Sullia taluk in Dakshina Kannada district after a brief two-day lull. Rain that began on Tuesday night has continued through Wednesday morning under overcast skies. Several places recorded 40–50 mm rainfall on Tuesday, and wet weather is expected to persist over the coastal and Malnad regions.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…

2 hours ago

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…

8 hours ago

ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…

8 hours ago

ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ

2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…

9 hours ago

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?

1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…

19 hours ago

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

1 day ago