ಉತ್ತರಭಾರತದಲ್ಲಿ ಸುರಿಯುತ್ತಿರುವ ಭಾರೀ ಮಳೆ ಹಾಗೂ ಹಿಮಪಾತ ಹಿನ್ನೆಲೆಯಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಿಮಾಚಲ ಪ್ರದೇಶದಲ್ಲಿ #HimachalPradesh ಪ್ರವಾಹದ# Flood ಸ್ಥಿತಿ ಉಂಟಾಗಿದೆ. ಇದೇ ವೇಳೆ ಲಡಾಕ್ #Ladakh ನಲ್ಲಿ ಬೆಂಗಳೂರಿಗರು #Bengaluru ಸಿಲುಕಿಕೊಂಡಿದ್ದಾರೆ. ಲಡಾಕ್‌ನ ರಾಷ್ಟ್ರೀಯ ಹೆದ್ದಾರಿಗಳು ಭೂ ಕುಸಿತವಾಗಿದ್ದು, ಕನ್ನಡಿಗರು ಅತಂತ್ರ ಸ್ಥಿತಿಯಲ್ಲಿದ್ದಾರೆ.
ಧುಮ್ಮಿಕ್ಕುತ್ತಿರುವ ನದಿಗಳಲ್ಲಿ ಸೇತುವೆ, ಮನೆಗಳು ಕೊಚ್ಚಿಕೊಂಡು ಹೋಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಸೋಲನ್, ಶಿಮ್ಲಾ, ಸಿರ್ಮೌರ್, ಕುಲು, ಮಂಡಿ, ಕಿನ್ನೌರ್ ಮತ್ತು ಲಾಹೌಲ್‌ನಲ್ಲಿ ಮುಂದಿನ 24 ಗಂಟೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆ ಈ 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ಇನ್ನುಳಿದಂತೆ ಉನಾ, ಹಮೀರ್‌ಪುರ, ಕಾಂಗ್ರಾ ಹಾಗೂ ಚಂಬಾದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಾತ್ರವಲ್ಲದೇ ಮಂಡಿ, ಕಿನ್ನೌರ್ ಹಾಗೂ ಲಾಹೌಲ್ ಭಾಗದಲ್ಲಿ ಹಠಾತ್ ಪ್ರವಾಹ ಎಚ್ಚರಿಕೆಯನ್ನು ನೀಡಲಾಗಿದೆ.
ಹಿಮಾಚಲದಲ್ಲಿ ಭಾರೀ ಮಳೆಗೆ ಈಗಾಗಲೇ 12ಕ್ಕೂ ಹೆಚ್ಚು ಪ್ರಮುಖ ಸೇತುವೆಗಳೇ ಹಾನಿಗೊಳಗಾಗಿವೆ. ಭೂಕುಸಿತ, ವಿದ್ಯುತ್ ವ್ಯತ್ಯಯ, ರಸ್ತೆಗಳಿಗೂ ಹಾನಿಯಾಗಿದೆ. ರಾಜ್ಯದಲ್ಲಿ ಕಳೆದ 48 ಗಂಟೆಗಳಲ್ಲಿ ವರುಣನ ಅಬ್ಬರಕ್ಕೆ 20 ಮಂದಿ ಬಲಿಯಾಗಿದ್ದಾರೆ. ಲಡಾಕ್‌ನಲ್ಲಿ ವಿಮಾನಗಳ ಹಾರಾಟವೂ ರದ್ದಾಗಿದೆ. ವಿಮಾನ ಸಿಗದೆ ಕಳೆದ ಎರಡು ದಿನಗಳಿಂದ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಮೂಲದ ವೈದ್ಯರು ಸಂಕಷ್ಟದಲ್ಲಿ ಸಿಲುಕಿದ್ದಾರೆ.
ಭಾರೀ ಮಳೆ, ದಟ್ಟ ಮಂಜು, ವಿಪರೀತ ಚಳಿಯಲ್ಲಿ ನಡುಗುತ್ತಲೇ ಬೆಂಗಳೂರಿಗರು ವೀಡಿಯೋ ಹಂಚಿಕೊಂಡಿದ್ದಾರೆ. ಹೇಗಾದ್ರೂ ಮಾಡಿ ಬೆಂಗಳೂರಿಗೆ ಕರೆಸಿಕೊಳ್ಳಿ. ತುಂಬಾ ಕಷ್ಟ ಆಗ್ತಿದೆ. ದಯವಿಟ್ಟು ಬೆಂಗಳೂರಿಗೆ ತಲುಪಿಸುವ ವ್ಯವಸ್ಥೆ ಮಾಡಿ ಎಂದು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.
ವಿಮಾನಗಳ ಹಾರಾಟ ಸ್ಥಗಿತಗೊಂಡ ಹಿನ್ನೆಲೆ ಏರ್‌ಪೋರ್ಟ್‌ನಲ್ಲಿ ಜನರ ದಂಡೇ ನೆರೆದಿದೆ. ನಿರಂತರ ಮಳೆಗೆ ಆರೋಗ್ಯ ಕೈಕೊಡ್ತಿದೆ. ಇಲ್ಲಿ ಇನ್ನೂ ಸುಮಾರು ಕನ್ನಡಿಗರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಅಲ್ಲಿನ ಪರಿಸ್ಥಿತಿಯನ್ನ ಬೆಂಗಳೂರು ಮೂಲದ ವೈದ್ಯರು ಬಿಚ್ಚಿಟ್ಟಿದ್ದಾರೆ.