Advertisement
MIRROR FOCUS

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

Share

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು, ಬಿಸಿಲಿನಿಂದ ಬಳಲುತ್ತಿದ್ದ ಜನತೆಗೆ ತಂಪಿನ ಅನುಭವ ನೀಡಿದೆ. ಸುಬ್ರಹ್ಮಣ್ಯ, ಬೆಳ್ತಂಗಡಿ ಹಾಗೂ ಕಾರ್ಕಳ ಭಾಗಗಳಲ್ಲಿ ಗುಡುಗು-ಮಿಂಚಿನೊಂದಿಗೆ ಉತ್ತಮ ಮಳೆ ಸುರಿದಿದೆ.

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮೀಣ ಪ್ರದೇಶಗಳಲ್ಲಿ ಸಂಜೆ ಸುರಿದ ಮಳೆ ಈ ವರ್ಷದ ಮೊದಲ ಗಮನಾರ್ಹ ಮಳೆಯಾಗಿ ದಾಖಲಾಗಿದೆ. ಬಿಸಿಗಾಳಿಯಿಂದ ಬಳಲುತ್ತಿದ್ದ ಪರಿಸರಕ್ಕೆ ಈ ಮಳೆ ತಂಪು ತಂದಿದೆ. ಆದರೆ ಅಚಾನಕ್ ಸುರಿದ ಮಳೆಯಿಂದ ಅಂಗಳದಲ್ಲಿ ಒಣಗಲು ಹಾಕಿದ್ದ ಅಡಿಕೆ ಒದ್ದೆಯಾಗಿದ್ದು, ಕೆಲವು ರೈತರಿಗೆ ಸಂಕಷ್ಟ ಉಂಟಾಗಿದೆ.

ಮಳೆಯ ಪ್ರಮಾಣದ ವಿವರ ಪ್ರಕಾರ, ಸುಬ್ರಹ್ಮಣ್ಯದ ಕಲ್ಲಾಜೆಯಲ್ಲಿ 42 ಮಿಲಿಮೀಟರ್ ಮಳೆಯಾದರೆ, ಮರ್ಕಂಜದಲ್ಲೂ 40 ಮಿಮೀ ಮಳೆಯಾಗಿದೆ. ಸುಳ್ಯದಲ್ಲಿ 9 ಮಿಮೀ, ಗುತ್ತಿಗಾರಿನಲ್ಲಿ 6 ಮಿಮೀ ಮತ್ತು ಸುಳ್ಯ ತಾಲೂಕಿನ ಹರಿಹರ ಗ್ರಾಮದಲ್ಲಿ 25 ಮಿಮೀ ಮಳೆಯಾಗಿದೆ ಎಂದು ವರದಿಯಾಗಿದೆ. ಕೆಲವೆಡೆ ಭಾರೀ ಗಾಳಿ ಬೀಸಿದ ಪರಿಣಾಮ ಮರಗಳು ಉರುಳಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಸುಬ್ರಹ್ಮಣ್ಯ, ಬಿಳಿನೆಲೆ, ಮರ್ಧಾಳ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆಯಾದರೆ, ಬೆಳ್ತಂಗಡಿ ತಾಲೂಕಿನ ನಾರಾವಿ ಮತ್ತು ಅಳದಂಗಡಿ ಭಾಗಗಳಲ್ಲೂ ಮಳೆ ಸುರಿದಿದೆ.

ಇನ್ನೊಂದೆಡೆ, ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬಜಗೋಳಿ ಭಾಗದಲ್ಲಿ ಈ ವರ್ಷದ ಮೊದಲ ಮಳೆ ದಾಖಲಾಗಿದೆ. ಅಕಾಲಿಕ ಮಳೆಯು ಒಂದು ಕಡೆ ಬಿಸಿಗಾಳಿಯಿಂದ ಪರಿಹಾರ ನೀಡಿದರೂ, ಅಡಿಕೆ ಒಣಗಿಸುವ ಪ್ರಕ್ರಿಯೆಯಲ್ಲಿದ್ದ ರೈತರಿಗೆ ನಷ್ಟದ ಆತಂಕ ಉಂಟುಮಾಡಿದೆ.

ಗುತ್ತಿಗಾರು ಬಳಿಯ ಕಲ್ಲಾಜೆಯಲ್ಲಿ ಮಳೆಯ ಅಬ್ಬರ : Photo Credit – ಶ್ಯಾಮ್‌ ಪ್ರಸಾದ್ ಕಲ್ಲಾಜೆ

Sudden heavy rain lashed parts of Dakshina Kannada and Udupi districts, with Subrahmanya and Markanja recording 40 mm rainfall. While the showers brought relief from intense heat, arecanut farmers faced concern as drying nuts were soaked. Strong winds also caused tree falls and power disruptions in some areas.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ

ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…

3 hours ago

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…

15 hours ago

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

1 day ago

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…

2 days ago

ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!

ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…

3 days ago