ಮುಂಗಾರು ಪ್ರವೇಶ ಆದರೂ ಕಳೆದ ಹತ್ತು ದಿನಗಳಿಂದ ವರುಣ ಕಣ್ಣಾ ಮುಚ್ಚಾಲೆ ಆಟ ಆಡುತ್ತಿದ್ದಾನೆ. ನಿರೀಕ್ಷೆಯಂತೆ ರಾಜ್ಯದ ಬಹುತೇಕ ಕಡೆ ಮಳೆ ಸುರಿದಿಲ್ಲ. ಇದೀಗ ಹವಾಮಾನ ಇಲಾಖೆ ಮತ್ತೆ ಎಚ್ಚರಿಕೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಜೂನ್ 20ರಿಂದ ಭಾರಿ ಮಳೆ #RainAlert ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗಲಿದ್ದು, ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
#KarnatakaWeather | ರಾಜ್ಯದ ವಿವಿಧ ಜಿಲ್ಲೆಗಳಿಗೆ ಮಹಾಮಳೆಯ ಎಚ್ಚರಿಕೆ | ಬೆಂಗಳೂರಿಗೆ 2-3 ದಿನ ಎಲ್ಲೋ ಅಲರ್ಟ್ ಘೋಷಣೆ | #Weather
#RainAlerthttps://t.co/0IMOQXMQ5IAdvertisement— theruralmirror (@ruralmirror) June 16, 2023
ದೇಶದಲ್ಲಿ ಮುಂದಿನ 4 ವಾರ ಮುಂಗಾರು ದುರ್ಬಲಗೊಳ್ಳಬಹುದು ಎಂದು ಮೂರು ದಿನಗಳ ಹಿಂದಷ್ಟೇ ಸ್ಕೈಮೆಟ್ ಅಂದಾಜಿಸಿತ್ತು. ಆದರೆ ಭಾರತೀಯ ಹವಾಮಾನ ಇಲಾಖೆ (IMD) ಮಳೆಯ ಸೂಚನೆ ನೀಡಿದೆ. ಮುಂದಿನ ಮೂರು ದಿನಗಳಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿರಲಿದೆ. ಕರ್ನಾಟಕ ಸೇರಿ ದೇಶದ ಬಹುತೇಕ ಭಾಗಗಳಲ್ಲಿ ಭಾನುವಾರದಿಂದ ಭಾರೀ ಮಳೆಯಾಗಲಿದೆ ಎಂದು IMD ತಿಳಿಸಿದೆ.
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ, ಗಾಳಿಯ ವೇಗವು ಗಂಟೆಗೆ 40-50 ಕಿ.ಮೀ ವೇಗದಲ್ಲಿರಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.