#KarnatakaWeather | ರಾಜ್ಯದ ವಿವಿಧ ಜಿಲ್ಲೆಗಳಿಗೆ ಮಹಾಮಳೆಯ ಎಚ್ಚರಿಕೆ | ಬೆಂಗಳೂರಿಗೆ 2-3 ದಿನ ಎಲ್ಲೋ ಅಲರ್ಟ್ ಘೋಷಣೆ |

June 16, 2023
9:27 AM

ಮುಂಗಾರು  ಪ್ರವೇಶ ಆದರೂ  ಕಳೆದ ಹತ್ತು ದಿನಗಳಿಂದ ವರುಣ ಕಣ್ಣಾ ಮುಚ್ಚಾಲೆ ಆಟ ಆಡುತ್ತಿದ್ದಾನೆ. ನಿರೀಕ್ಷೆಯಂತೆ ರಾಜ್ಯದ ಬಹುತೇಕ ಕಡೆ ಮಳೆ ಸುರಿದಿಲ್ಲ. ಇದೀಗ ಹವಾಮಾನ ಇಲಾಖೆ ಮತ್ತೆ ಎಚ್ಚರಿಕೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಜೂನ್ 20ರಿಂದ ಭಾರಿ ಮಳೆ #RainAlert ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗಲಿದ್ದು, ಎಲ್ಲೋ ಅಲರ್ಟ್​ ಘೋಷಿಸಲಾಗಿದೆ.

Advertisement
Advertisement

Advertisement

ದೇಶದಲ್ಲಿ ಮುಂದಿನ 4 ವಾರ ಮುಂಗಾರು ದುರ್ಬಲಗೊಳ್ಳಬಹುದು ಎಂದು ಮೂರು ದಿನಗಳ ಹಿಂದಷ್ಟೇ ಸ್ಕೈಮೆಟ್‌ ಅಂದಾಜಿಸಿತ್ತು. ಆದರೆ  ಭಾರತೀಯ ಹವಾಮಾನ ಇಲಾಖೆ (IMD) ಮಳೆಯ ಸೂಚನೆ ನೀಡಿದೆ. ಮುಂದಿನ ಮೂರು ದಿನಗಳಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿರಲಿದೆ. ಕರ್ನಾಟಕ ಸೇರಿ ದೇಶದ ಬಹುತೇಕ ಭಾಗಗಳಲ್ಲಿ ಭಾನುವಾರದಿಂದ ಭಾರೀ ಮಳೆಯಾಗಲಿದೆ ಎಂದು IMD ತಿಳಿಸಿದೆ.

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ, ಗಾಳಿಯ ವೇಗವು ಗಂಟೆಗೆ 40-50 ಕಿ.ಮೀ ವೇಗದಲ್ಲಿರಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಚಾರ : ತಜ್ಞರ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ
April 29, 2024
5:50 PM
by: The Rural Mirror ಸುದ್ದಿಜಾಲ
ನಿಮಗಿದು ಗೊತ್ತೇ? : ಆರೋಗ್ಯಕ್ಕಾಗಿ ಭೂ ವಿದ್ಯುತ್ ಆಯಸ್ಕಾಂತದ ಮಹತ್ವ… : ಅರ್ಥಿಂಗ್/ಗ್ರೌಂಡಿಂಗ್ ಹಾಗೂ ಆರೋಗ್ಯ!
April 29, 2024
3:30 PM
by: The Rural Mirror ಸುದ್ದಿಜಾಲ
ಎರಡನೇ ಹಂತದ ಮತದಾನಕ್ಕೆ ರಾಜ್ಯದಲ್ಲಿ ಭರ್ಜರಿ ತಯಾರಿ : ಭಾರತ ವಿಶ್ವದ ಟಾಪ್ 3 ಸ್ಥಾನಕ್ಕೇರಿಸುವ ಶಕ್ತಿ ನಿಮ್ಮ ಮತಕ್ಕಿದೆ : ಮೋದಿ
April 29, 2024
2:51 PM
by: The Rural Mirror ಸುದ್ದಿಜಾಲ
ರೈತರ ಪಾಲಿಗೆ ನೆರವಾದ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ : 17ನೇ ಕಂತಿನ ಹಣ ರೈತರ ಖಾತೆಗೆ ಯಾವಗ ಬರುತ್ತೆ..?
April 29, 2024
2:40 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror