ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ | ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯ ಮುನ್ನೆಚ್ಚರಿಕೆ

August 27, 2025
8:49 PM

ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ಹಲವೆಡೆ ಮಳೆಯಾಗಿದೆ.  ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಮುಂದಿನ ಎರಡು ದಿನಗಳ ಕಾಲ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.   ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.  ಇನ್ನುಳಿದ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣವಿದ್ದು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror