ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ಹಲವೆಡೆ ಮಳೆಯಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಮುಂದಿನ ಎರಡು ದಿನಗಳ ಕಾಲ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣವಿದ್ದು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…