MIRROR FOCUS

ರಾಜ್ಯದ ಹಲವು ಭಾಗಗಳಲ್ಲಿ ಗಾಳಿ ಸಹಿತ ಭಾರೀ ಮಳೆ : ರೈತರ ಮೊಗದಲ್ಲಿ ಸಂತಸ : ಕೆಲವೆಡೆ ಹಾನಿ

Share

ರಾಜ್ಯಾದ್ಯಂತ ಬರಗಾಲದ(Drought) ಛಾಯೆ ಆವರಿಸಿತ್ತು. ಕುಡಿವ ನೀರಿಗಾಗಿ(Drinking water) ಜನ-ಜಾನುವಾರುಗಳು ಪರಿತಪಿಸುವಂತಾಗಿತ್ತು. ಬಿಸಿಲಿನ ಧಗೆ ದಿನೇ ದಿನೇ ಏರತೊಡಗಿತ್ತು. ಮಳೆಗಾಗಿ(Rain) ಎಲ್ಲರೂ ವರುಣ ದೇವರನ್ನು ಪ್ರಾರ್ಥಿಸುವಂತಾಗಿತ್ತು. ಆದರೆ ಈಗ ರಾಜ್ಯದ ಚಾಮರಾಜನಗರ(Chamarajanagara), ಮಂಗಳೂರು(Mangaluru), ಹಾಸನ (Hassan), ಹಾವೇರಿ(Haveri) ಸೇರಿದಂತೆ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಮಳೆಯ ಪರಿಣಾಮದಿಂದ ರೈತರು(Farmer) ಒಂದೆಡೆ ಸಂಭ್ರಮ ಪಟ್ಟರೆ ಇನ್ನೊಂದೆಡೆ ಕೆಲವರು ಬೆಳೆ ಹಾನಿ(Crop Lost) ಹಾಗೂ ಕೆಲವು ಅವಾಂತರಗಳಿಂದ ಸಣ್ಣಪುಟ್ಟ ತೊಂದರೆ ಅನುಭವಿಸಿದ್ದಾರೆ.

ಚಾಮರಾಜನಗರದ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಿದೆ. ಇದರ ಪರಿಣಾಮ ಹೆಬ್ಬಸೂರು ಗ್ರಾಮದ ಮಂಜುನಾಥ್ ಎಂಬವರಿಗೆ ಸೇರಿದ ಬಾಳೆ ಬೆಳೆ ನೆಲಕಚ್ಚಿದ್ದು, ಲಕ್ಷಾಂತರ ರೂ. ನಷ್ಟ ಅನುಭವಿಸಿದ್ದು, ಸೂಕ್ತ ಪರಿಹಾರ ಒದಗಿಸುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.ಹಾಸನ ಜಿಲ್ಲೆಯ ವಿವಿಧೆಡೆ ಭಾರೀ ಗಾಳಿ, ಗುಡುಗು- ಸಿಡಿಲು ಸಹಿತ ಮಳೆಯಾಗಿದೆ. ಬಿರುಗಾಳಿಗೆ ಬೇಲೂರಿನ ಗುಣಿಕೆರೆ ಬೀದಿಯಲ್ಲಿ ಕೇಶವಮೂರ್ತಿ ಎಂಬವರ ಮನೆಯ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದಿದೆ. ಪರಿಣಾಮ ಗೃಹಪಯೋಗಿ ವಸ್ತುಗಳು ಜಖಂ ಆಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಸ್ಥಳಕ್ಕೆ ಪುರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಧಾರವಾಡದಲ್ಲಿ ಗಾಳಿ ಸಹಿತ ಧಾರಾಕಾರವಾಗಿ ಮಳೆಯಾಗಿದೆ. ಪರಿಣಾಮ ನಗರದ ಹಲವೆಡೆ ಮರಗಳು ಧರೆಗೆ ಉರುಳಿವೆ. ಕಳೆದ ಒಂದು ಗಂಟೆಯಿಂದ ಮಳೆ ಮುಂದುವರಿಯುತ್ತಿದೆ. ಹುಬ್ಬಳ್ಳಿಯಲ್ಲೂ ಮಳೆಯಾಗುತ್ತಿದೆ. ನಗರದ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿತ್ತು.

ಚಿಕ್ಕಮಗಳೂರು ನಗರ, ಜಯಪುರ, ಮೂಡಿಗೆರೆ, ಎನ್.ಆರ್.ಪುರ, ಕೊಪ್ಪ ಭಾಗಗಳಲ್ಲಿಯೂ ವರುಣ ಅಬ್ಬರಿಸಿದ್ದಾನೆ. ಸುಮಾರು ಒಂದು ಗಂಟೆಗಳ ಕಾಲ ಮಳೆ ಸುರಿದಿದೆ. ಹಲವೆಡೆ ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ಗ್ರಾಮೀಣ ಭಾಗಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಮಳೆಯಿಂದ ರೈತರು, ಅಡಿಕೆ, ಕಾಫಿ-ಮೆಣಸು ಬೆಳೆಗಾರರ ಮೊಗದಲ್ಲಿ ಸಂತಸ ಮನೆಮಾಡಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಗಾಳಿ, ಗುಡುಗು ಸಹಿತ ಮಳೆಯಾಗಿದೆ. ಈ ವೇಳೆ ಬಿಸಿಲಿನ ಬೇಗೆಯಿಂದ ಬಳಲಿದ್ದ ಭಕ್ತರು ಮಳೆಯನ್ನು ಸಂಭ್ರಮಿಸಿದ್ದಾರೆ.

  • ಅಂತರ್ಜಾಲ ಮಾಹಿತಿ

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನ | ಆತಂಕಪಡುವ ಅಗತ್ಯವಿಲ್ಲ | ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಸ್ಪಷ್ಟನೆ

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6…

6 hours ago

ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಗುಡುಗು ಸಹಿತ ಗಾಳಿ-ಮಳೆ | ಎರಡನೇ ಬಾರಿ ಸುರಿದ ಧಾರಾಕಾರ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ.…

6 hours ago

ಸರ್ಕಾರಿ ವೈದ್ಯರು ಆಸ್ಪತ್ರೆಗಳಲ್ಲಿ ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಇರಬೇಕು- ಸಚಿವ ಶರಣಪ್ರಕಾಶ್ ಪಾಟೀಲ್

ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…

21 hours ago

ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧ

ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…

21 hours ago

ಕೆಂಪು ಮೆಣಸಿನಕಾಯಿ ಬೆಳೆಗಾರರಿಗೆ ಸಂಕಷ್ಟ | ಬೆಂಬಲ ಬೆಲೆ ಯೋಜನೆ ರಾಜ್ಯಕ್ಕೂ ವಿಸ್ತರಿಸುವಂತೆ ಮುಖ್ಯಮಂತ್ರಿ ಪತ್ರ | ಕೇಂದ್ರದ ಗಮನ ಸೆಳೆದ ಸಚಿವರು |

ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…

21 hours ago

ಅಕ್ರಮ ಮರಳು ಗಣಿಗಾರಿಕೆ | 5 ವರ್ಷಗಳಲ್ಲಿ 47 ಕೋಟಿ ರೂಪಾಯಿ ದಂಡ ಸಂಗ್ರಹ

ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ…

21 hours ago