ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಬಲಗೊಂಡು ನವೆಂಬರ್ 29 ರ ರಾತ್ರಿ ತಮಿಳುನಾಡಿನ ಚೆನೈ ಮೂಲಕ ಭೂ ಪ್ರವೇಶಿಸುವ ಸಾಧ್ಯತೆ ಹೆಚ್ಚಿದೆ. ನವೆಂಬರ್ 30ರಂದು ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಮೂಲಕ ರಾಜ್ಯಕ್ಕೆ ಆಗಮಿಸುವ ನಿರೀಕ್ಷೆ ಇದೆ. ಪರಿಣಾಮವಾಗಿ ನವೆಂಬರ್ 30ರಿಂದ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಭಾರಿ ಮಳೆಯ ಆತಂಕವಿದೆ. ಮುಂದಿನ 1 ವಾರದ ಕಾಲ ರಾಜ್ಯದಲ್ಲಿ ಮಳೆಯ ಮುನ್ಸೂಚನೆ ಇದೆ.…..ಮುಂದೆ ಓದಿ….
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವು ತಮಿಳುನಾಡು ಕರಾವಳಿಯ ಸಮೀಪ ಚಂಡಮಾರುತವಾಗಿ ತೀವ್ರಗೊಂಡಿದ್ದು, ಭಾರಿ ಮಳೆಯ ಮುನ್ಸೂಚನೆ ಇದೆ. ಉತ್ತರ ಶ್ರೀಲಂಕಾ ಕರಾವಳಿಯ ಬಳಿ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವು ಕೇಂದ್ರೀಕೃತವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಇಂದು ತಿಳಿಸಿದೆ. ತಮಿಳುನಾಡು, ಪುದುಚೇರಿ ಮತ್ತು ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳಲ್ಲಿ ಶನಿವಾರದವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಸಿದೆ.
ಮಳೆಯ ಬಗ್ಗೆ ಮಾಹಿತಿ ನೀಡಿದ ಐಎಂಡಿ ಮಹಾನಿರ್ದೇಶಕ ಮೃತ್ಯುಂಜಯ್ ಮಹೋಪಾತ್ರ, ವಾಯುವ್ಯ ವಾಯುಭಾರ ಕುಸಿತವು ಚಂಡಮಾರುತವಾಗಿ ತೀವ್ರಗೊಳ್ಳುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.