ಮಳೆಗೆ ಏನೇನಾಯ್ತು…? | ಮಳೆಯ ಅಬ್ಬರಕ್ಕೆ ಎಲ್ಲೆಲ್ಲಾ ಶಾಲೆಗಳಿಗೆ ರಜೆ..? | ಮುಂಜಾಗ್ರತೆಗಳು ಏನೇನು..? | ಶಿರಾಡಿ ಘಾಟಿಯಲ್ಲಿ ವಾಹನ ಸಂಚಾರ ಏನಾಯ್ತು..? | ಶನಿವಾರವೂ ರೆಡ್‌ ಎಲರ್ಟ್‌ |

July 19, 2024
8:58 PM
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಹವಾಮಾನ ಇಲಾಖೆ ಮತ್ತೆ ರೆಡ್‌ ಎಲರ್ಟ್‌ ಘೋಷಣೆ ಮಾಡಿದೆ.ಕೆಲವು ಕಡೆ ಹಾನಿಯಾಗಿದೆ. ಮಳೆ ಅವಾಂತರ ಸೃಷ್ಟಿಸಿದೆ. ಮಳೆಯ ಕಾರಣದಿಂದ ಕೆಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಹವಾಮಾನ ಇಲಾಖೆ ಮತ್ತೆ ರೆಡ್‌ ಎಲರ್ಟ್‌ ಘೋಷಣೆ ಮಾಡಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಶಾಲೆ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.

Advertisement
Advertisement
Advertisement

ಕರಾವಳಿ ಜಿಲ್ಲೆಯಲ್ಲಿ ನಿರೀಕ್ಷೆಯಂತೆ ಶುಕ್ರವಾರ ಇಡೀ ದಿನ ಭಾರೀ ಮಳೆಯಾಗಿದೆ. ಮಳೆಯ ಕಾರಣದಿಂದ ಎಲ್ಲೆಡೆಯೂ ನೀರಿನ ಮಟ್ಟ ಏರಿಕೆಯಾಗಿತ್ತು.ಇಡೀ ದಿನ ಸುರಿದ ಧಾರಾಕಾರ ಮಳೆಗೆ ಸುಳ್ಯ ನಗರದ ಹೋಟೆಲ್, ಅಂಗಡಿಗಳಿಗೆ ನೀರು ನುಗ್ಗಿರುವ ಘಟನೆ ವರದಿಯಾಗಿದೆ.ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸ್ನಾನಘಟ್ಟ ಜಲಾವೃತವಾಗಿದ್ದು, ಸುಬ್ರಹ್ಮಣ್ಯ-ಪುತ್ತೂರು ಸಂಪರ್ಕ ರಸ್ತೆ ಕಡಿತಗೊಂಡಿತ್ತು. ನದಿ ತಪ್ಪಲು ಪ್ರದೇಶದ ಕೃಷಿ ಭೂಮಿ ಮುಳುಗಡೆಯಾಗಿತ್ತು.

Advertisement

ಹಾಸನ ಜಿಲ್ಲಾಡಳಿತವು ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟಿಯ ಮೂಲಕ ಬೆಳಗ್ಗೆ 6 ಗಂಟೆಯಿಂದ ಸಂಜೆ 6:00ಯ ವರೆಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ. ಸಂಜೆ 6 ರಿಂದ ಬೆಳಗ್ಗೆ 6 ರವರೆಗೆ ಪೊಲೀಸ್, ಅಗ್ನಿ ಶಾಮಕ ದಳ, ಆಂಬುಲೆನ್ಸ್ ಹೊರತುಪಡಿಸಿ ಯಾವುದೇ ವಾಹನ ಸಂಚಾರಕ್ಕೂ ಅವಕಾಶವಿಲ್ಲ ಎಂದು ಆದೇಶಿಸಿದೆ.

ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪದ ದೊಡ್ಡ ತಪ್ಪಲು ಪ್ರದೇಶದಲ್ಲಿ ಗುಡ್ಡ ಕುಸಿಯುತ್ತಿರುವುದರಿಂದ ಸಂಭಾವ್ಯ ಅಪಾಯವನ್ನು ತಪ್ಪಿಸಲು ಈ ಕ್ರಮ ಕೈಗೊಂಡಿತ್ತು. ಶುಕ್ರವಾರ ಬೆಳಗ್ಗೆ ಶಿರಾಡಿ ಗಡಿಯ ಚೌಡೇಶ್ವರಿ ದೇವಸ್ಥಾನದ ಮೇಲಿನ ಭಾಗದಲ್ಲಿ ಬೃಹತ್ ಮರವೊಂದು ರಸ್ತೆಗೆ ಬಿದ್ದಿದ ಪರಿಣಾಮ ಕೆಲ ಕಾಲ ಸಂಚಾರ ಸ್ಥಗಿತಗೊಂಡಿತ್ತು. ಗುರುವಾರ ರಾತ್ರಿಯಿಂದಲೂ ಶಿರಾಡಿ ಹಾಗೂ ಮಾರನಹಳ್ಳಿ ಭಾಗದಲ್ಲಿ ಭಾರಿ ಮಳೆ ಆಗುತ್ತಿದ್ದು ಶುಕ್ರವಾರವೂ ಮಳೆಯ ಪ್ರಮಾಣ ಹೆಚ್ಚಾಗಿತ್ತು. ಆದರೆ ವಾಹನ ಸಂಚಾರದಲ್ಲಿ ಯಾವುದೇ ವ್ಯತ್ಯಾಸವಾಗಲಿಲ್ಲ. ಮಾರನ ಹಳ್ಳಿಯ ದೊಡ್ಡ ತಪ್ಪಲ್ಲಲ್ಲಿ ಗುಡ್ಡ ಕುಸಿತ ಸಣ್ಣ ಪ್ರಮಾಣದಲ್ಲಿ ಮುಂದುವರೆದಿದೆ. ಗುಂಡ್ಯ ಚೆಕ್ ಪೋಸ್ಟ್ ಬಳಿ ನೆಲ್ಯಾಡಿ ಹೊರಠಾಣಾ ಪೊಲೀಸರು ಸಂಚಾರ ದಟ್ಟಣೆಯನ್ನು ನಿಯಂತ್ರಿಸುತ್ತಿದ್ದಾರೆ.

Advertisement
ಶಿರಾಡಿಯಲ್ಲಿ ವಾಹನ ಓಡಾಟ(ಬೆಳಗ್ಗೆ)

ಕೊಡಗು ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳನ್ನು ಹೋಲಿಸಿದರೆ ಶುಕ್ರವಾರ ಮಳೆ ಕಡಿಮೆಯಾಗಿದೆ. ಆದರೆ ಪ್ರವಾಹ ಪರಿಸ್ಥಿತಿ  ಮುಂದುವರೆದಿದೆ.  ಉಡುಪಿ ಜಿಲ್ಲೆ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸತತವಾಗಿ ಮಳೆ ಸುರಿಯುತ್ತಿದೆ.

ಮಲೆನಾಡಿನ ಭಾಗದಲ್ಲಿ ನಿರಂತರವಾಗಿ ಭಾರಿ ಮಳೆ ಸುರಿಯುತ್ತಿದ್ದು, ತುಂಗಭದ್ರಾ ನದಿಯಲ್ಲಿನ ನೀರಿನ ಹರಿವು ಹೆಚ್ಚಳವಾಗಿದೆ. ಭಾರೀ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದು.ಉತ್ತರಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಗುಡ್ಡಕುಸಿತ ಪ್ರಕರಣ ಹೆಚ್ಚುತ್ತಲೇ ಇದೆ. ಅಲ್ಲದೆ, ನದಿಗಳು ಅಪಾಯದ‌‌ ಮಟ್ಟ ಮೀರಿ ಹರಿಯುತ್ತಿದೆ. ಶಿವಮೊಗ್ಗನಗರದ ವಿವಿಧೆಡೆ ಮಳೆ, ಗಾಳಿಗೆ ಬೃಹತ್‌ ಮರಗಳು ಧರೆಗುರುಳಿವೆ.ಜಿಲ್ಲೆಯ ಕೆಲವು ಕಡೆಗೆ ಮಳೆಗೆ ಹಾನಿಯಾಗಿದೆ.ಎಲ್ಲೆಡೆಯು ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಆಯಾ ಜಿಲ್ಲೆಗಳಲ್ಲಿ ಅಗತ್ಯ ಕ್ರಮಗಳ ಬಗ್ಗೆ ತಕ್ಷಣವೇ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದಾರೆ.

Advertisement

ಮುಂದಿನ 2 ದಿನಗಳ ಜಿಲ್ಲಾವಾರು ಮಳೆಯ ಎಚ್ಚರಿಕೆ: ಜುಲೈ 20 ರಂದು- ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಹವಾಮಾನ ಇಲಾಖೆಯ ವತಿಯಿಂದ ರೆಡ್ಅಲರ್ಟ್ ನೀಡಲಾಗಿದೆ. ಹಾಸನ ಜಿಲ್ಲೆಗೆ ಆರೆಂಜ್ಅಲರ್ಟ್ ನೀಡಲಾಗಿದೆ.

Advertisement

 

Advertisement

The malenadu-coastal region has been affected by heavy rainfall, causing flooding in many areas. Farming activities have become challenging in the region.

The coastal district experienced heavy rainfall as predicted on Friday, resulting in a rise in water levels across the area. The Snanaghatta in Kukke Subrahmanya was flooded due to the continuous downpour, and the Subrahmanya-Puttur connection road was impassable. The agricultural land along the riverbank was also submerged.

Advertisement

The Hassan district administration has permitted travel on National Highway 75 through Shiradi Ghati from 6 am to 6 pm. It has been mandated that only police, fire brigade, and ambulance vehicles will be allowed to pass through from 6 pm to 6 am.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆಯ ಮೌಲ್ಯವರ್ಧನೆ ದಾರಿ | ಅಡಿಕೆ ಸಿಪ್ಪೆಯ ನಾರಿನಿಂದ ಬಟ್ಟೆಯ ನೂಲು | ಕೇರಳದಲ್ಲಿ ಇನ್ನೊಂದು ಪ್ರಯತ್ನ |
October 30, 2024
7:32 AM
by: ಮಹೇಶ್ ಪುಚ್ಚಪ್ಪಾಡಿ
ಆರೋಗ್ಯ ಯೋಜನೆಗಳಿಗೆ ಪ್ರಧಾನಿ ಚಾಲನೆ | ಆಯುಷ್ಮಾನ್ ಭಾರತ್  ಜನಾರೋಗ್ಯ ಯೋಜನೆ ವಿಸ್ತರಣೆ
October 30, 2024
6:21 AM
by: The Rural Mirror ಸುದ್ದಿಜಾಲ
ಧನ್ವಂತರಿ ಜಯಂತಿ | ಆಯುರ್ವೇದ ಚಿಕಿತ್ಸೆ ಕುರಿತು ಜನ ಜಾಗೃತಿ
October 30, 2024
6:07 AM
by: The Rural Mirror ಸುದ್ದಿಜಾಲ
ಪ್ರತೀ ಜಿಲ್ಲೆಯಲ್ಲಿ ರೈತರಿಗೆ ತರಬೇತಿ ಕೇಂದ್ರ | ಮಣ್ಣು ಪರೀಕ್ಷೆ ನಡೆಸಲು ಯೋಜನೆಗಳು |
October 30, 2024
6:04 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror