Advertisement
MIRROR FOCUS

ಭರ್ಜರಿಯಾಗಿ ಸುರಿದ ಮಳೆ | ಕರಾವಳಿಯಲ್ಲಿ ಗಾಳಿಯೂ ಜೋರು | ಗ್ರಾಮೀಣ ಜನರ ಪರದಾಟ |

Share

ರಾಜ್ಯದಲ್ಲಿ ಮಳೆ ಅಬ್ಬರಿಸುತ್ತಿದೆ. ಅದರಲ್ಲೂ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಗಾಳಿಯ ಅಬ್ಬರವೂ ಜೋರಾಗಿದೆ. ಹೀಗಾಗಿ ಗ್ರಾಮೀಣ ಭಾಗದ ಅಲ್ಲಲ್ಲಿ ಮರಗಳು ಉರುಳಿದೆ, ಕೃಷಿ ನಾಶವಾಗಿದೆ. ಮಳೆಯ ಅಬ್ಬರ ಮುಂದುವರಿದಿದೆ. ಹಳ್ಳ-ಹೊಳೆ-ನದಿ ತುಂಬಿ ಹರಿಯುತ್ತಿದೆ.

Advertisement
Advertisement
Advertisement
Advertisement

ಭಾರೀ ಮಳೆಗೆ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ನದಿ ಉಕ್ಕಿ ಹರಿಯುತ್ತಿದ್ದು ಸ್ನಾನ ಘಟ್ಟ ಮುಳುಗಡೆಯಾಗಿದೆ. ಪುತ್ತೂರು-ಸುಬ್ರಹ್ಮಣ್ಯ ಸಂಪರ್ಕ ರಸ್ತೆಯ ಮೇಲೆ ನೀರು ಹರಿದಿದ್ದು, ತಾತ್ಕಾಲಿಕವಾಗಿ ಸಂಪರ್ಕ ಕಡಿತಗೊಂಡಿದೆ. ಗ್ರಾಮೀಣ ಭಾಗದಲ್ಲೂ ಮಳೆಯ ಅಬ್ಬರಕ್ಕೆ ಹೊಳೆ ತುಂಬಿ ಹರಿಯುತ್ತಿದೆ. ಇಡೀ ದಿನ ಆಗಾಗ ಸುರಿದ ಮಳೆ ಹಾಗೂ ಗಾಳಿಗೆ ಕೃಷಿಗೆ ಸಂಕಷ್ಟವಾಯಿತು. ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಮಳೆ ಹಾಗೂ ಗಾಳಿಯ ಅಬ್ಬರ ಜೋರಾಗಿತ್ತು.………ಮುಂದೆ ಓದಿ……..

Advertisement
ಕುಕ್ಕೆ ಸುಬ್ರಹ್ಮಣ್ಯ-ಪುತ್ತೂರು ರಸ್ತೆಯ ಮೇಲೆ ಹರಿದ ನೀರು | ತಾತ್ಕಾಲಿಕ ವಾಹನ ಸಂಚಾರ ಸ್ಥಗಿತಗೊಂಡಿರುವುದು

ಉಡುಪಿ ಜಿಲ್ಲೆಯಲ್ಲೂ ಉತ್ತಮ ಮಳೆಯಾಗಿದೆ.ಮಳೆಯ ಅಬ್ಬರಕ್ಕೆ ದೊಡ್ಡಣಗುಡ್ಡೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಡುಗೆಮನೆ ಗೋಡೆ ಕುಸಿದು ಬಿದ್ದಿದೆ. ನದಿಗಳು ಉಕ್ಕಿ ಹರಿಯುತ್ತಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಈ ಭಾಗದ ಹಳ್ಳ-ಕೊಳ್ಳ, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಕಾಳಿನದಿ ಯೋಜನೆ 2ನೇ ಹಂತ ಕದ್ರಾ ಜಲಾನಯನ ಪ್ರದೇಶದಲ್ಲಿ ಮುಂಗಾರು ಪ್ರಾರಂಭವಾಗಿದ್ದು, ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ.

Advertisement

ಹಾಸನ ಜಿಲ್ಲೆಯ ಸಕಲೇಶಪುರ, ಆಲೂರು, ಅರಕಲಗೂಡು ಹಾಗೂ ಬೇಲೂರು ಪ್ರದೇಶಗಳಲ್ಲೂ ಉತ್ತಮ ಮಳೆಯಾಗಿದೆ. ಕೊಡಗು ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ವಿವಿದೆಡೆ ಹಾನಿಯಾಗಿದೆ. ಗಾಳಿಗೆ ಗ್ರಾಮೀಣ ಭಾಗದ ಅಲ್ಲಲ್ಲಿ ಮರ ಉರುಳಿ ಬಿದ್ದಿದೆ. ಮರಗೂಡು ಗ್ರಾಮದ ಅಣ್ಣು ಎಂಬವರ ಮನೆಗೆ ಹಾನಿಯಾಗಿದೆ.ಭಾಗಮಂಡಲ ಗ್ರಾಮದ ದೇವರಕೊಲ್ಲಿಯಲ್ಲೂ ಮನೆಗೆ ಹಾನಿಯಾಗಿದೆ. ಮಳೆಯ ಅಬ್ಬರ ಮುಂದುವರಿದಿದೆ.

ಕಾವೇರಿಯ ಕೆ.ಆರ್.ಎಸ್ ಡ್ಯಾಂಗೆ ಒಳಹರಿವು ಮತ್ತಷ್ಟು ಏರಿಕೆಯಾಗಿದೆ. ಮಲೆನಾಡಿನಲ್ಲಿ ಆರ್ಭಟಿಸುತ್ತಿರುವ ಮಳೆಯಿಂದಾಗಿತುಂಗಾ ಡ್ಯಾಂ ತುಂಬಿದೆ. ಇಂದು ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾರ್ಭಟ ಜೋರಾಗಿದ್ದು, ಕೆ.ಆರ್.ಎಸ್ ಡ್ಯಾಂಗೆ ಒಳಹರಿವು ಮತ್ತಷ್ಟು ಏರಿಕೆಯಾಗಿದೆ.

Advertisement

ಚಿಕ್ಕಮಗಳೂರಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮಳೆಯ ಅಬ್ಬರ ಹೆಚ್ಚಾದಂತೆ ಪರಿಸರ ಸೌಂದರ್ಯ ಸವಿಯಲೂ ಜನರು ಆಗಮಿಸುತ್ತಿದ್ದಾರೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಎಚ್ಚರಿಕೆ ಅಗತ್ಯವಾಗಿದೆ.

The state is experiencing heavy rainfall, particularly in coastal and hilly areas. Strong wind gusts are also being reported in coastal districts, leading to fallen trees and significant damage to agriculture in rural areas. The rainfall is ongoing and has caused the stream-river to overflow.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

4 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

3 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

3 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

3 days ago