#Monsoon | ಮುಂದುವರೆಯಲಿದೆ ಮಹಾ ಮಳೆಯ ಆರ್ಭಟ | ಉತ್ತರಭಾರತದ ರಾಜ್ಯಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ |

July 12, 2023
11:52 AM
ಉತ್ತರಭಾರತದಲ್ಲಿ ಮತ್ತೆ ಜೋರಾಗಲಿದೆ ವರುಣನ ಆರ್ಭಟ ಎಂದು ಹವಾಮಾಣ ಇಲಾಖೆ ಎಚ್ಚರಿಸಿದೆ. ನದಿ ತೀರದ ಎಲ್ಲಾ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ.

ಭಾರತದ ಉತ್ತರಭಾಗದಲ್ಲಿ ಮಳೆಯ ಪ್ರತಾಪ ಇನ್ನೂ ನಿಂತಿಲ್ಲ. ಈಗಾಗಲೇ ಅಲ್ಲಿನ ಜನರ ಜೀವನ ಮೂರಾಬಟ್ಟೆಯಾಗಿದೆ. ಆದರೆ ಉತ್ತರ ಭಾರತದ ಕೆಲ ರಾಜ್ಯಗಳಲ್ಲಿ ಮಹಾ ಮಳೆಯ ಆರ್ಭಟ ಮತ್ತಷ್ಟು ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದ ಒಂದು ವಾರದಿಂದ ನಿರಂತರ ಮಳೆ ಸುರಿಯುತ್ತಿದ್ದು,  ಜುಲೈ 11ರಂದು ಹಿಮಾಚಲಪ್ರದೇಶ, ಪಂಜಾಬ್, ಹರ್ಯಾಣ, ಚಂಡೀಗಢದಲ್ಲಿ ಮಳೆಯು ಭಾರಿ ಅನಾಹುತವನ್ನುಂಟು ಮಾಡಿತ್ತು. ಉತ್ತರಾಖಂಡ ಮತ್ತು ಉತ್ತರ ಪ್ರದೇಶದ ಪಕ್ಕದ ಪ್ರದೇಶಗಳಲ್ಲಿ ಜುಲೈ 12 ರಂದು 115.6 ರಿಂದ 204.4 ಮಿಮೀ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರಾಖಂಡದಲ್ಲಿ ಭಾರೀ ಮಳೆಯ ನಡುವೆ, IMD ಜುಲೈ 12 ಕ್ಕೆ ಆರೆಂಜ್ ಅಲರ್ಟ್ ನೀಡಿದೆ. ಸತತ ಭಾರೀ ಮಳೆಯಿಂದಾಗಿ ಉತ್ತರಾಖಂಡದ ಸೋನ್‌ಪ್ರಯಾಗ ಮತ್ತು ಗೌರಿಕುಂಡ್‌ನಲ್ಲಿ ಕೇದಾರನಾಥ ಯಾತ್ರೆಯನ್ನು ನಿಲ್ಲಿಸಲಾಗಿದೆ.

ಪಂಜಾಬ್ ಪಟಿಯಾಲಾ, ರೂಪನಗರ, ಮೋಗಾ, ಲುಧಿಯಾನದಲ್ಲಿ 9 ಸಾವಿರಕ್ಕೂ ಅಧಿಕ ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ ಹಾಗೂ ಮೇಘಾಲಯ, ಅರುಣಾಚಲಪ್ರದೇಶ, ನಾಗಾಲ್ಯಾಂಡ್​, ಮಣಿಪುರ ಮತ್ತು ಬಿಹಾರದಲ್ಲಿ ಮುಂದಿನ 2 ದಿನಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜುಲೈ 14 ಹಾಗೂ 15ರಂದು ಒಡಿಶಾದಲ್ಲಿ ಭಾರಿ ಮಳೆಯಾಗಲಿದೆ, ಯಮುನಾ ನದಿಯ ನೀರಿನ ಮಟ್ಟವು ಬುಧವಾರ ಮುಂಜಾನೆ 207.18 ಮೀಟರ್‌ಗೆ ಏರಿದೆ ಮತ್ತು ರಾಜಧಾನಿಯಲ್ಲಿ ಪ್ರವಾಹದ ಭೀತಿಯನ್ನು ಉಂಟುಮಾಡುವ ನಿರೀಕ್ಷೆಯಿದೆ. ಅತಿ ಹೆಚ್ಚು ಪ್ರವಾಹ ಮಟ್ಟ ದಾಖಲೆ 207.49 ಮೀಟರ್ ಆಗಿದೆ. ಕೇಂದ್ರ ಜಲ ಆಯೋಗದ (ಸಿಡಬ್ಲ್ಯುಸಿ) ಪ್ರವಾಹ ಮೇಲ್ವಿಚಾರಣಾ ಪೋರ್ಟಲ್ ಪ್ರಕಾರ, ಯಮುನಾ ನದಿಯು ಅತ್ಯಧಿಕ ದಾಖಲೆಗೆ ಉಬ್ಬಿತು ಮತ್ತು ಹಳೆ ರೈಲ್ವೆ ಸೇತುವೆಯಲ್ಲಿ ಮಂಗಳವಾರ ರಾತ್ರಿ 8 ಗಂಟೆಗೆ 206.76 ಮೀಟರ್‌ಗಳಿಂದ ಬುಧವಾರ ಬೆಳಿಗ್ಗೆ 7 ಗಂಟೆಗೆ 207.18 ಮೀಟರ್‌ಗಳಿಗೆ ಏರಿದೆ. ಮಳೆಯಿಂದಾಗಿ ಯಮುನಾ ನದಿಯ ನೀರಿನ ಮಟ್ಟ ಹೆಚ್ಚುತ್ತಿದೆ. ನದಿ ತೀರದ ಎಲ್ಲಾ ಪೊಲೀಸ್ ಠಾಣೆಗಳಿಗೆ ಈ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ.

(ಕೃಪೆ : ಅಂತರ್ಜಾಲ )

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror