ಭಾರತದ ಉತ್ತರಭಾಗದಲ್ಲಿ ಮಳೆಯ ಪ್ರತಾಪ ಇನ್ನೂ ನಿಂತಿಲ್ಲ. ಈಗಾಗಲೇ ಅಲ್ಲಿನ ಜನರ ಜೀವನ ಮೂರಾಬಟ್ಟೆಯಾಗಿದೆ. ಆದರೆ ಉತ್ತರ ಭಾರತದ ಕೆಲ ರಾಜ್ಯಗಳಲ್ಲಿ ಮಹಾ ಮಳೆಯ ಆರ್ಭಟ ಮತ್ತಷ್ಟು ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಒಂದು ವಾರದಿಂದ ನಿರಂತರ ಮಳೆ ಸುರಿಯುತ್ತಿದ್ದು, ಜುಲೈ 11ರಂದು ಹಿಮಾಚಲಪ್ರದೇಶ, ಪಂಜಾಬ್, ಹರ್ಯಾಣ, ಚಂಡೀಗಢದಲ್ಲಿ ಮಳೆಯು ಭಾರಿ ಅನಾಹುತವನ್ನುಂಟು ಮಾಡಿತ್ತು. ಉತ್ತರಾಖಂಡ ಮತ್ತು ಉತ್ತರ ಪ್ರದೇಶದ ಪಕ್ಕದ ಪ್ರದೇಶಗಳಲ್ಲಿ ಜುಲೈ 12 ರಂದು 115.6 ರಿಂದ 204.4 ಮಿಮೀ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರಾಖಂಡದಲ್ಲಿ ಭಾರೀ ಮಳೆಯ ನಡುವೆ, IMD ಜುಲೈ 12 ಕ್ಕೆ ಆರೆಂಜ್ ಅಲರ್ಟ್ ನೀಡಿದೆ. ಸತತ ಭಾರೀ ಮಳೆಯಿಂದಾಗಿ ಉತ್ತರಾಖಂಡದ ಸೋನ್‌ಪ್ರಯಾಗ ಮತ್ತು ಗೌರಿಕುಂಡ್‌ನಲ್ಲಿ ಕೇದಾರನಾಥ ಯಾತ್ರೆಯನ್ನು ನಿಲ್ಲಿಸಲಾಗಿದೆ.
ಪಂಜಾಬ್ ಪಟಿಯಾಲಾ, ರೂಪನಗರ, ಮೋಗಾ, ಲುಧಿಯಾನದಲ್ಲಿ 9 ಸಾವಿರಕ್ಕೂ ಅಧಿಕ ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ ಹಾಗೂ ಮೇಘಾಲಯ, ಅರುಣಾಚಲಪ್ರದೇಶ, ನಾಗಾಲ್ಯಾಂಡ್, ಮಣಿಪುರ ಮತ್ತು ಬಿಹಾರದಲ್ಲಿ ಮುಂದಿನ 2 ದಿನಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜುಲೈ 14 ಹಾಗೂ 15ರಂದು ಒಡಿಶಾದಲ್ಲಿ ಭಾರಿ ಮಳೆಯಾಗಲಿದೆ, ಯಮುನಾ ನದಿಯ ನೀರಿನ ಮಟ್ಟವು ಬುಧವಾರ ಮುಂಜಾನೆ 207.18 ಮೀಟರ್‌ಗೆ ಏರಿದೆ ಮತ್ತು ರಾಜಧಾನಿಯಲ್ಲಿ ಪ್ರವಾಹದ ಭೀತಿಯನ್ನು ಉಂಟುಮಾಡುವ ನಿರೀಕ್ಷೆಯಿದೆ. ಅತಿ ಹೆಚ್ಚು ಪ್ರವಾಹ ಮಟ್ಟ ದಾಖಲೆ 207.49 ಮೀಟರ್ ಆಗಿದೆ. ಕೇಂದ್ರ ಜಲ ಆಯೋಗದ (ಸಿಡಬ್ಲ್ಯುಸಿ) ಪ್ರವಾಹ ಮೇಲ್ವಿಚಾರಣಾ ಪೋರ್ಟಲ್ ಪ್ರಕಾರ, ಯಮುನಾ ನದಿಯು ಅತ್ಯಧಿಕ ದಾಖಲೆಗೆ ಉಬ್ಬಿತು ಮತ್ತು ಹಳೆ ರೈಲ್ವೆ ಸೇತುವೆಯಲ್ಲಿ ಮಂಗಳವಾರ ರಾತ್ರಿ 8 ಗಂಟೆಗೆ 206.76 ಮೀಟರ್‌ಗಳಿಂದ ಬುಧವಾರ ಬೆಳಿಗ್ಗೆ 7 ಗಂಟೆಗೆ 207.18 ಮೀಟರ್‌ಗಳಿಗೆ ಏರಿದೆ. ಮಳೆಯಿಂದಾಗಿ ಯಮುನಾ ನದಿಯ ನೀರಿನ ಮಟ್ಟ ಹೆಚ್ಚುತ್ತಿದೆ. ನದಿ ತೀರದ ಎಲ್ಲಾ ಪೊಲೀಸ್ ಠಾಣೆಗಳಿಗೆ ಈ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ.
(ಕೃಪೆ : ಅಂತರ್ಜಾಲ )
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…
ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ…
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…