Advertisement
MIRROR FOCUS

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ | ಇದುವರೆಗಿನ ಹಾನಿ ಎಷ್ಟು..?

Share

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮಳೆಗೆ ಇದುವರೆಗೆ ಹಾನಿಯಾಗಿರುವ ಮಾಹಿತಿಯನ್ನು ಜಿಲ್ಲಾಡಳಿತ ನೀಡಿದೆ. ಜನವರಿಯಿಂದ ಜೂನ್ 15 ರವರೆಗೆ ಜಿಲೆಯಲ್ಲಿ ಸರಾಸರಿ 596.9 ಮಿಲಿ ಮೀಟರ್ ಮಳೆಯಾಗುತ್ತಿದ್ದು, ಈ ಬಾರಿ 1414.8 ಮಿಲಿಮೀಟರ್ ಮಳೆಯಾಗಿದೆ. ಮಂಗಳೂರು ನಗರಕ್ಕೆ ನೀರುಣಿಸುವ ಬಂಟ್ವಾಳ ತಾಲೂಕಿನ ತುಂಬೆ ವೆಂಟೆಡ್ ಅಣೆಕಟ್ಟೆಯ ನೀರಿನ ಮಟ್ಟ 4.50 ಮೀಟರ್‌ಗೆ ಏರಿಕೆಯಾಗಿದೆ. ಜೀವನದಿಗಳಾದ ನೇತ್ರಾವತಿ, ಕುಮಾರಧಾರ ನದಿಗಳು ತುಂಬಿ ಹರಿಯುತ್ತಿವೆ.

ಮುಂಜಾಗೃತಾ ಕ್ರಮವಾಗಿ ಜಿಲ್ಲೆಯಲ್ಲಿ 6 ಸಾಂತ್ವನ ಕೇಂದ್ರಗಳನ್ನು ಗೊತ್ತುಪಡಿಸಲಾಗಿದ್ದು, ಒಂದು ಕೇಂದ್ರ ಕಾರ್ಯನಿರ್ವಹಿಸುತ್ತಿದೆ. ಮಳೆಯ ಪರಿಣಾಮ ಜಿಲ್ಲೆಯಲ್ಲಿ ಸಾಕಷ್ಟು ಹಾನಿಯೂ ಸಂಭವಿಸಿದೆ. ಏಪ್ರಿಲ್ 1 ರಿಂದ ಇದುವರೆಗೆ ಒಟ್ಟು 751 ಮನೆಗಳಿಗೆ ಹಾನಿಯಾಗಿದೆ. ಈ ಪೈಕಿ 72 ಮನೆಗಳು ಸಂಪೂರ್ಣ ನಾಶವಾಗಿವೆ. ಪ್ರಾಕೃತಿಕ ವಿಕೋಪದಿಂದ ಒಟ್ಟು 5  ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. 35 ಜಾನುವಾರು ಪ್ರಾಣಹಾನಿ ಸಂಭವಿಸಿದೆ.  ಭಾರೀ ಮಳೆಯ ಪರಿಣಾಮ 4.93 ಹೆಕ್ಟೇರ್ ಪ್ರದೇಶದಲ್ಲಿನ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದೆ. 4123 ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, 115 ವಿದ್ಯುತ್ ಪರಿವರ್ತಕಗಳು ಹಾನಿಗೀಡಾಗಿವೆ. 19 ಸೇತುವೆಗಳಿಗೆ ಹಾನಿಯಾಗಿದೆ. 206 ಕಿಲೋಮೀಟರ್ ಉದ್ದದ ರಸ್ತೆಗಳು ಹದಗೆಟ್ಟಿವೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ

ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…

1 hour ago

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

11 hours ago

ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..

ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…

11 hours ago

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…

11 hours ago

ಸ್ವಾವಲಂಬಿ ಸಾರಥಿ ಯೋಜನೆ | ಆಟೋ ಗೂಡ್ಸ್ ವಾಹನ ಖರೀದಿಗೆ ರೂ.4 ಲಕ್ಷ ಸಹಾಯಧನ

ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ…

11 hours ago