ಜೂನ್‌ ಮೊದಲ ವಾರದಲ್ಲೇ ರಾಜ್ಯಾದ್ಯಂತ ಭರ್ಜರಿ ಮಳೆ | ಭಾರೀ ಮಳೆಯಿಂದ ಆಲಮಟ್ಟಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು | ಜನರಲ್ಲಿ ಮಂದಹಾಸ

June 8, 2024
12:17 PM

ಮುಂಗಾರು(Mansoon) ಪ್ರವೇಶ ಕೇರಳಕ್ಕೆ(Kerala) ಒಂದು ವಾರಗಳ ಹಿಂದೇಯೇ ಆಗಿದ್ದರೂ  ರಾಜ್ಯಕ್ಕೆ ಇಂದಿನಿಂದ ಪ್ರವೇಶ ಪಡೆಯಲಿದೆ ಎಂದು ಹವಾಮಾನ ಇಲಾಖೆ ತಜ್ಞರು(IMD) ಉಲ್ಲೇಖಿಸಿದ್ದಾರೆ.  ಆದರೆ, ಒಂದು ವಾರದಿಂದ ಮುಂಗಾರು ಪೂರ್ವ ಮಳೆಯೇ(Pre MAsoon rain) ಭರ್ಜರಿಯಾಗಿ ಸುರಿಯುತ್ತಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಹಾಗೆ ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ (Maharashtra) ಭಾರೀ ಮಳೆಯಾಗುತ್ತಿದೆ. ಅದರಂತೆ ಕೃಷ್ಣಾನದಿ(Krishna River) ಉಗಮಸ್ಥಾನ ಮಹಾಬಲೇಶ್ವರದಲ್ಲೂ ಭಾರೀ ಮಳೆಯಾಗಿದ್ದು, ಆಲಮಟ್ಟಿ ಜಲಾಶಯಕ್ಕೆ (Almatti Dam) ಒಳಹರಿವು ಹೆಚ್ಚಾಗಿದೆ.

Advertisement
Advertisement
Advertisement
ಶುಕ್ರವಾರದಿಂದ (ಜೂ.7) ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಆರಂಭವಾಗಿದೆ. ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯದಲ್ಲಿ 2,578 ಕ್ಯೂಸೇಕ್ ಒಳಹರಿವು ದಾಖಲಾಗಿದೆ. ಇದರಿಂದ ಕೃಷ್ಣಾ ನದಿ ಪಾತ್ರದ ಜನರಲ್ಲಿ ಸಂತಸ ಮನೆ ಮಾಡಿದೆ. ಕಳೆದ ವರ್ಷ ಜೂನ್ ಕಳೆದರೂ ಒಳಹರಿವು ಇರಲಿಲ್ಲ. ಈ ವರ್ಷ ಜೂನ್ ಮೊದಲ ವಾರದಲ್ಲೇ ಒಳಹರಿವು ಆರಂಭವಾದ ಕಾರಣ ಕೃಷ್ಣಾ ನದಿ ಪಾತ್ರದ ಜನರಲ್ಲಿ ಸಂತಸ ಮೂಡಿದೆ.

ಜಿಲ್ಲೆಯಾದ್ಯಂತ ತಡರಾತ್ರಿ ಧಾರಾಕಾರ ಮಳೆ: ವಿಜಯಪುರ ಜಿಲ್ಲೆಯ ಹಲವೆಡೆ ಶುಕ್ರವಾರ ತಡರಾತ್ರಿ ಧಾರಾಕಾರ ಮಳೆ ಸುರಿದಿದೆ. ಇದರಿಂದ ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿದೆ. 15ಕ್ಕೂ ಅಧಿಕ ಮನೆಗಳಿಗೆ ಮಳೆ ನೀರು ನುಗ್ಗಿದ್ದು, ಮಳೆಯ ಆರ್ಭಟಕ್ಕೆ ಜನರು ಕಂಗಾಲಾಗಿದ್ದಾರೆ. ಮನೆಯಿಂದ ನೀರು ಹೊರಹಾಕಲು ಜನರ ಹರಸಾಹಸ ಪಡುವಂತಾಗಿದೆ. ನಿನ್ನೆ ತಡರಾತ್ರಿ 1 ಗಂಟೆಗಳ ಕಾಲ ಸತತವಾಗಿ ಸುರಿದ ಮಳೆಯಿಂದ ಈ ಆವಾಂತರ ಸೃಷ್ಟಿಯಾಗಿದೆ.

Advertisement

ಕರಾವಳಿಯಲ್ಲಿ ಮುಂದಿನ 15 ದಿನ ಮಳೆ: ಇನ್ನೂ ರಾಜ್ಯದಲ್ಲಿ ದಾವಣಗೆರೆ, ಬೆಳಗಾವಿ, ಚಿತ್ರದುರ್ಗ, ಧಾರವಾಡ, ದಕ್ಷಿಣ ಕನ್ನಡ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಮಳೆಯ ಅರ್ಭಟ ಮುಂದುವರಿದಿದೆ. ಉಡುಪಿ , ಉತ್ತರಕನ್ನಡ ಜಿಲ್ಲೆಗಳಿಗೆ ಭಾರೀ ಮಳೆ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. 30-40 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಮುಂದಿನ 15 ದಿನ ಕರಾವಳಿ ಭಾಗದಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 24.11.2024 | ರಾಜ್ಯದಲ್ಲಿ ಒಣಹವೆ ಮುಂದುವರಿಕೆ | ದೂರವಾದ ಮಳೆಯ ಸಾಧ್ಯತೆ
November 24, 2024
12:05 PM
by: ಸಾಯಿಶೇಖರ್ ಕರಿಕಳ
ಅಡಿಕೆಯ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆ ಹೇಗೆ ? | ವಿಜ್ಞಾನಿ ಡಾ.ಭವಿಷ್ಯ ಅವರಿಂದ ಮಾಹಿತಿ |
November 24, 2024
7:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಎಲೆಚುಕ್ಕಿರೋಗ ನಿರ್ವಹಣಾ ವಿಧಾನಗಳು ಹೇಗೆ..?
November 24, 2024
7:09 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-11-2024 | ರಾಜ್ಯದಲ್ಲಿ ಒಣಹವೆ ಮುಂದುವರಿಕೆ | ನ.28 ರಿಂದ ಕೆಲವು ಕಡೆ ಮಳೆ ಸಾಧ್ಯತೆ |
November 23, 2024
12:23 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror