ಮುಂಗಾರು(Mansoon) ಪ್ರವೇಶ ಕೇರಳಕ್ಕೆ(Kerala) ಒಂದು ವಾರಗಳ ಹಿಂದೇಯೇ ಆಗಿದ್ದರೂ ರಾಜ್ಯಕ್ಕೆ ಇಂದಿನಿಂದ ಪ್ರವೇಶ ಪಡೆಯಲಿದೆ ಎಂದು ಹವಾಮಾನ ಇಲಾಖೆ ತಜ್ಞರು(IMD) ಉಲ್ಲೇಖಿಸಿದ್ದಾರೆ. ಆದರೆ, ಒಂದು ವಾರದಿಂದ ಮುಂಗಾರು ಪೂರ್ವ ಮಳೆಯೇ(Pre MAsoon rain) ಭರ್ಜರಿಯಾಗಿ ಸುರಿಯುತ್ತಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಹಾಗೆ ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ (Maharashtra) ಭಾರೀ ಮಳೆಯಾಗುತ್ತಿದೆ. ಅದರಂತೆ ಕೃಷ್ಣಾನದಿ(Krishna River) ಉಗಮಸ್ಥಾನ ಮಹಾಬಲೇಶ್ವರದಲ್ಲೂ ಭಾರೀ ಮಳೆಯಾಗಿದ್ದು, ಆಲಮಟ್ಟಿ ಜಲಾಶಯಕ್ಕೆ (Almatti Dam) ಒಳಹರಿವು ಹೆಚ್ಚಾಗಿದೆ.
ಜಿಲ್ಲೆಯಾದ್ಯಂತ ತಡರಾತ್ರಿ ಧಾರಾಕಾರ ಮಳೆ: ವಿಜಯಪುರ ಜಿಲ್ಲೆಯ ಹಲವೆಡೆ ಶುಕ್ರವಾರ ತಡರಾತ್ರಿ ಧಾರಾಕಾರ ಮಳೆ ಸುರಿದಿದೆ. ಇದರಿಂದ ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿದೆ. 15ಕ್ಕೂ ಅಧಿಕ ಮನೆಗಳಿಗೆ ಮಳೆ ನೀರು ನುಗ್ಗಿದ್ದು, ಮಳೆಯ ಆರ್ಭಟಕ್ಕೆ ಜನರು ಕಂಗಾಲಾಗಿದ್ದಾರೆ. ಮನೆಯಿಂದ ನೀರು ಹೊರಹಾಕಲು ಜನರ ಹರಸಾಹಸ ಪಡುವಂತಾಗಿದೆ. ನಿನ್ನೆ ತಡರಾತ್ರಿ 1 ಗಂಟೆಗಳ ಕಾಲ ಸತತವಾಗಿ ಸುರಿದ ಮಳೆಯಿಂದ ಈ ಆವಾಂತರ ಸೃಷ್ಟಿಯಾಗಿದೆ.
ಕರಾವಳಿಯಲ್ಲಿ ಮುಂದಿನ 15 ದಿನ ಮಳೆ: ಇನ್ನೂ ರಾಜ್ಯದಲ್ಲಿ ದಾವಣಗೆರೆ, ಬೆಳಗಾವಿ, ಚಿತ್ರದುರ್ಗ, ಧಾರವಾಡ, ದಕ್ಷಿಣ ಕನ್ನಡ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಮಳೆಯ ಅರ್ಭಟ ಮುಂದುವರಿದಿದೆ. ಉಡುಪಿ , ಉತ್ತರಕನ್ನಡ ಜಿಲ್ಲೆಗಳಿಗೆ ಭಾರೀ ಮಳೆ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. 30-40 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಮುಂದಿನ 15 ದಿನ ಕರಾವಳಿ ಭಾಗದಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
– ಅಂತರ್ಜಾಲ ಮಾಹಿತಿ
ಬದಲಾದ ಕಾಲದಲ್ಲಿ ನಾವು ಇಂತಹ ಪರಿಕರಕೊಳ್ಳುವ ಮೊದಲು ನಮಗೆಷ್ಟು ಇದು ಪ್ರಯೋಜನಕಾರಿ ಎಂದು…
ಐತಿಹಾಸಿಕ ಕುಂಭಮೇಳ ನಡೆಯುತ್ತಿರುವ ಪ್ರಯಾಗ್ ರಾಜ್ ನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ …
ರಾಸಾಯನಿಕಗಳನ್ನು ಹೊಂದಿರುವ ಗೊಬ್ಬರದ ಅತಿಯಾದ ಬಳಕೆಯಿಂದಾಗಿ ಭೂಮಿಯಲ್ಲಿ ಎರೆಹುಳು ಸೇರಿದಂತೆ ಎಲ್ಲ ಜೀವಿಗಳು…
ಕರ್ನಾಟಕದ ಹಲವೆಡೆ ಕಾಫಿ ನವೋದ್ಯಮಕ್ಕೆ ಅವಕಾಶಗಳನ್ನು ಸೃಷ್ಟಿಸಿ, ಸ್ವ ಸಹಾಯ ಗುಂಪುಗಳ ಸುಮಾರು…
ಕೃಷಿ ಸದೃಢವಾಗಿದ್ದರೆ ದೇಶ ಸದೃಢವಾಗಿರುತ್ತದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ. …
ಬೇಸಿಗೆಯಲ್ಲಿ ಈ ಬಾರಿ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್…