ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಇಂದೂ ಮಳೆ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ ಕಾರಣದಿಂದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಯ ಬಹುತೇಕ ತಾಲೂಕುಗಳ ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ,ಪುತ್ತೂರು, ಬಂಟ್ವಾಳ, ಮೂಡಬಿದರೆ ಸೇರಿದಂತೆ ವಿವಿಧ ತಾಲೂಕುಗಳಿಗೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸಾಗರ ತಾಲೂಕಿನಲ್ಲಿ ಮಾತ್ರಾ ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯಲ್ಲೂ ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಕುಮಟಾ, ಅಂಕೋಲಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ದಾಂಡೇಲಿ ಹಾಗೂ ಜೋಯಿಡಾ ತಾಲ್ಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ ಹಾಗೂ ಶಿವಮೊಗ್ಗದಲ್ಲಿ ಉತ್ತಮ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…
ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…
ಚೀನಾದ Chinese Academy of Tropical Agricultural Sciences (CATAS) ವಿಜ್ಞಾನಿಗಳು Electron…
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…
ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…