ತಮಿಳುನಾಡಿನಲ್ಲಿ ಮುಂದುವರೆದ ಭಾರಿ ಮಳೆ | ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ | ಸಹಾಯಕ್ಕೆ ನಿಂತ ನೌಕಾಪಡೆ

December 20, 2023
1:27 PM

ತಮಿಳುನಾಡಿನಲ್ಲಿ(Tamil Nadu) ವರುಣ(Rain) ತಾಂಡವವಾಡುತ್ತಿದ್ದಾನೆ. ಭಾರಿ ಮಳೆಗೆ ಅಲ್ಲಿನ ಜನರ ಜೀವನ ಅಸ್ತವ್ಯಸ್ತಗೊಂಡಿದೆ. ಕನ್ಯಾಕುಮಾರಿ ಸಮುದ್ರ(Kanyakumari) ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ‘ವಿಶೇಷವಾಗಿ ತಿರುನಲ್ವೇಲಿ, ತೂತುಕುಡಿ, ತೆಂಕಶಿ ಮತ್ತು ಕನ್ಯಾಕುಮಾರಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಭಾರಿ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಹೀಗೆ ತೊಂದರೆಗೆ “ಸಿಲುಕಿರುವ ಸಾರ್ವಜನಿಕರಿಗೆ ಸಹಾಯ ಮಾಡಲು ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ(The National and State Disaster Management Force) ತೀವ್ರ ರಕ್ಷಣಾ ಕಾರ್ಯಾಚರಣೆ(rescue operations) ಕೈಗೊಂಡಿದೆ. ಭಾರತೀಯ ನೌಕಾಪಡೆಯು ಟುಟಿಕೋರಿನ್ ಜಿಲ್ಲೆಯಲ್ಲಿ ಸಂತ್ರಸ್ತರಿಗೆ ಸಹಾಯ ಮಾಡಲು ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತವಾಗಿದೆ.

ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಮಿಳುನಾಡಿದ ದಕ್ಷಿಣ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದೆ. ಪರಿಸ್ಥಿತಿ ನಿಭಾಯಿಸಲು ತಮಿಳುನಾಡು ಸರ್ಕಾರ ಭಾರತೀಯ ನೌಕಾಪಡೆಯ ಸಹಾಯ ಕೋರಿದೆ. ಹೀಗಾಗಿ, ರಾಮನಾಥಪುರಂನ ಐಎನ್‌ಎಸ್‌ ಪರುಂಡು ನಿಲ್ದಾಣದಿಂದ ಎಎಲ್‌ಎಚ್ ಹೆಲಿಕಾಪ್ಟರ್ ಮೂಲಕ ಶ್ರೀವೈಕುಂಟಂ ರೈಲು ನಿಲ್ದಾಣದಲ್ಲಿ ಸಿಲುಕಿರುವ ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ. ಭಾರತೀಯ ನೌಕಾಪಡೆಯ ಎರಡು ಟೋರ್ನಿಯರ್ ವಿಮಾನಗಳು ಟುಟಿಕೋರಿನ್ ವಿಮಾನ ನಿಲ್ದಾಣಕ್ಕೆ ಪರಿಹಾರ ಸಾಮಗ್ರಿಗಳನ್ನು ಸಾಗಿಸಲು ಮಧುರೈ ವಿಮಾನ ನಿಲ್ದಾಣದಲ್ಲಿ ಸನ್ನದ್ದವಾಗಿರಿಸಲಾಗಿದೆ. ವಿಮಾನ ನಿಲ್ದಾಣದಲ್ಲಿ ಸಿಲುಕಿದವರ ರಕ್ಷಣೆಗೆ ಧಾವಿಸಲಾಗಿದೆ. ಇಲ್ಲಿಗೆ ಸುಮಾರು 410 ಕೆಜಿ ತೂಕದ ಪರಿಹಾರ ಸಾಮಗ್ರಿಗಳನ್ನು ನೌಕಾಪಡೆಯ ವಿಮಾನಗಳ ಮೂಲಕ ಪೂರೈಕೆ ಮಾಡಲಾಗಿದೆ. ಇಂದು ಸುಮಾರು 3.5 ಟನ್ ತೂಕದ ಪರಿಹಾರ ಸಾಮಗ್ರಿಗಳನ್ನು ಟುಟಿಕೋರಿನ್‌ಗೆ ಕೊಂಡೊಯ್ಯಬೇಕಿದೆ.

ಪ್ರವಾಹ ಪೀಡಿತ ಪ್ರದೇಶಗಳಲ್ಲಿ 10 ಸದಸ್ಯರನ್ನೊಳಗೊಂಡ ತಂಡಗಳನ್ನು ನಿಯೋಜಿಸಲಾಗಿದೆ. ಇದುವರೆಗೆ 150ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದ್ದು, 250 ಕುಟುಂಬಗಳಿಗೆ ಪರಿಹಾರ ಸಾಮಗ್ರಿ ಒದಗಿಸಲಾಗಿದೆ. ಅಲ್ಲದೇ, ಭಾರತೀಯ ನೌಕಾಪಡೆಯ ಡೋರ್ನಿಯ‌ರ್ ಏರ್‌ಕ್ರಾಫ್ಟ್, ಎಎಲ್‌ಎಚ್ ಹೆಲಿಕಾಪ್ಟರ್‌ಗಳನ್ನು ನಿರಂತರವಾಗಿ ಪೀಡಿತ ಜನರಿಗೆ ಸಹಾಯ ಮಾಡಲು ನಿಯೋಜಿಸಲಾಗಿದೆ. ನೌಕಾಪಡೆ ಮಾತ್ರ ಭಾರತೀಯ ಸೇನೆ ಕೂಡಾ ರಕ್ಷಣಾ ಪರಿಹಾರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದೆ. ತಮಿಳುನಾಡು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಿರುನಲ್ವೇಲಿ ಜಿಲ್ಲೆಯಲ್ಲಿ ಪ್ರವಾಹದ ಸಂದರ್ಭದಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿದೆ.

ದಕ್ಷಿಣದ ಜಿಲ್ಲೆಗಳಲ್ಲಿ ಪ್ರವಾಹಕ್ಕೆ ಸಿಲುಕಿರುವ ಪ್ರದೇಶಗಳಲ್ಲಿ ಭಾರತೀಯ ಕರಾವಳಿ ರಕ್ಷಣಾ ಪಡೆ ತನ್ನ ಹಡಗುಗಳು ವೆ ವಿಮಾನಗಳೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಐಸಿಜಿ ತಂಡ ಇಂದು ತೂತುಕುಡಿ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಸಿಲುಕಿದ್ದ 200 ಜನರನ್ನು ರಕ್ಷಿಸಿದೆ. ಭಾರತೀಯ ಹವಾಮಾನ ಕೇಂದ್ರದ ಭಾರಿ ಮಳೆಯ ಎಚ್ಚರಿಕೆ ನೀಡಿ ಹೀಗಾಗಿ ಭಾರತೀಯ ಕೋಸ್ಟ್ ಗಾರ್ಡ್ ನೌಕೆ ಸುಜಯ್, ಮಳೆ ಪೀಡಿತ ಪ್ರದೇಶಗಳಲ್ಲಿ ಬೀಡುಬಿಟ್ಟಿದೆ.

Kanyakumari sea in Tamil Nadu and neighboring areas have been receiving heavy rains for the past two days. The districts of Tirunelveli, Thoothukudi, Tenkashi and Kanyakumari have received the highest rainfall. Many areas have been flooded due to heavy rains. The National and State Disaster Management Force has launched intensive rescue operations to help the distressed public. The Indian Navy is engaged in rescue operations to help the victims in Tuticorin district.

– ಅಂತರ್ಜಾಲ ಮಾಹಿತಿ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ
June 14, 2026
3:27 PM
by: ಸಾಯಿಶೇಖರ್ ಕರಿಕಳ
ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ
June 14, 2026
12:52 PM
by: ದ ರೂರಲ್ ಮಿರರ್.ಕಾಂ
ಬ್ರಿಕ್ಸ್ ‘ಇಂದೋರ್ ಘೋಷಣೆ’ ಅಂಗೀಕಾರ – ಜಾಗತಿಕ ಕೃಷಿ ಸಹಕಾರಕ್ಕೆ ಹೊಸ ದಿಕ್ಕು
June 14, 2026
6:54 AM
by: ದ ರೂರಲ್ ಮಿರರ್.ಕಾಂ
2026ರಲ್ಲಿ ‘ಸೂಪರ್ ಎಲ್‌ನಿನೊ’ ಎಚ್ಚರಿಕೆ – ಭಾರತದ ಮುಂಗಾರು ಮತ್ತು ಕೃಷಿಗೆ ಹೊಸ ಸವಾಲು?
June 13, 2026
9:19 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror