ರಾಜ್ಯದ ಕರಾವಳಿ ಸೇರಿದಂತೆ ಹಲವೆಡೆ ಐದು ದಿನ ಭಾರಿ ಮಳೆ

August 28, 2025
7:44 PM

ಕರ್ನಾಟಕದ ಕರಾವಳಿ, ಮಧ್ಯ ಮಹಾರಾಷ್ಟ್ರ, ಛತ್ತೀಸ್ ಗಢ ಮತ್ತು ಉತ್ತರಾಖಂಡ್ ರಾಜ್ಯಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ್ಲಲಿ ಸೆಪ್ಟೆಂಬರ್ 2 ರವರೆಗೂ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ಜನರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ತಗ್ಗು ಪ್ರದೇಶಗಳಿಗೆ ತೆರಳದಂತೆ ಹಾಗೂ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಸಲಹೆ ನೀಡಲಾಗಿದೆ. ಒಡಿಶಾ, ವಿದರ್ಭ, ಮಧ್ಯಪ್ರದೇಶ, ಪಶ್ಚಿಮಬಂಗಾಳ ಮತ್ತು ಸಿಕ್ಕಿಂ ಹಾಗೂ ಜಾರ್ಖಂಡ್ ರಾಜ್ಯಗಳಲ್ಲೂ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಗುಜರಾತ್ ಪ್ರದೇಶ, ಗೋವಾ, ಕೊಂಕಣ, ಮಧ್ಯ ಮಹಾರಾಷ್ಟ್ರಗಳಲ್ಲೂ ಸಹ ಮೋಡ ಮುಸುಕಿದ ವಾತಾವರಣವಿರಲಿದ್ದು, ಧಾರಾಕಾರ ಮಳೆ ನಿರೀಕ್ಷಿಸಲಾಗುತ್ತಿದೆ. ರಾಜಸ್ಥಾನ, ಹರಿಯಾಣದಲ್ಲಿ ಮುಂದಿನ 7 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ.

ದಾವಣಗೆರೆ ಜಿಲ್ಲಾದ್ಯಂತ ವ್ಯಾಪಕ ಮಳೆ ಮುಂದುವರಿದಿದ್ದು, ಕೃಷಿ ಚಟುವಟಿಕೆಗಳಿಗೆ ಅಡ್ಡಿ ಉಂಟಾಗಿದೆ. ನಿರಂತರ ಮಳೆಯಿಂದ ತರಕಾರಿ ಬೆಳಗಳು ಗಿಡದಲ್ಲಿಯೇ ಕೊಳೆತು ಹೋಗುತ್ತಿವೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಜಗಳೂರು ಮತ್ತು ದಾವಣಗೆರೆ ತಾಲ್ಲೂಕಿನ ಹಲವು ಕೆರೆಗಳು ಸಂಪೂರ್ಣ ಭರ್ತಿಯಾಗಿವೆ. ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಆದ ಬೆಳೆನಷ್ಟ ಪರಿಹಾರವಾಗಿ ದಾವಣಗೆರೆ ಜಿಲ್ಲೆಗೆ 8 ಕೋಟಿ ರೂಪಾಯಿ ಪರಿಹಾರ ಬಿಡುಗಡೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಜಿ.ಎಂ.ಗಂಗಾಧರ ಸ್ವಾಮಿ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲೂ ಮಳೆಯಾಗುತ್ತಿದ್ದು, ಲಿಂಗನಮಕ್ಕಿ ಜಲಾಶಯದ ಎಲ್ಲಾ ಗೇಟುಗಳನ್ನು ಮೇಲೆತ್ತಲಾಗಿದೆ. ಇದರಿಂದ ಶರಾವತಿ ನದಿಯಲ್ಲಿ ಪುನಃ ನೀರಿನ ಹರಿವು ಹೆಚ್ಚಳವಾಗಿದೆ. ಜೋಗ ಜಲಪಾತವು ಮೈ ದುಂಬಿ ಹರಿಯುತ್ತಿದೆ. ಲಿಂಗನಮಕ್ಕಿ ಜಲಾಶಯಕ್ಕೆ ಇವತ್ತು 47232  ಕ್ಯೂಸೆಕ್ ಒಳ ಹರಿವು ಇದೆ.   ಲಿಂಗನಮಕ್ಕಿ ಜಲಾಶಯದಿಂದ ಭಾರಿ ಪ್ರಮಾಣದ ನೀರು ಹೊರಗೆ ಬಿಡುತ್ತಿರುವುದರಿಂದ ಜೋಗದ ಎಲ್ಲ ಜಲಪಾತಗಳು ಮೈದುಂಬಿ ಧುಮ್ಮಿಕ್ಕುತ್ತಿವೆ. ಸದ್ಯಕ್ಕೆ ಜೋಗ ಜಲಪಾತದ ಚಹರೆಯೆ ಬದಲಾಗಿದೆ.ಲಿಂಗನಮಕ್ಕಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಹಾಗಾಗಿ ಜಲಾಶಯದ ಒಳ ಹರಿವು ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ
March 7, 2026
3:02 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ
March 7, 2026
2:12 PM
by: ಸಾಯಿಶೇಖರ್ ಕರಿಕಳ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ
March 7, 2026
11:36 AM
by: ಮಿರರ್‌ ಡೆಸ್ಕ್
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror