ವಾಣಿಜ್ಯ ನಗರಿ(commercial city) ಮುಂಬೈನಲ್ಲಿ(Mumbai) ಕಳೆದ 24 ಗಂಟೆಗಳ ಅವಧಿಯಲ್ಲಿ ದಾಖಲೆಯ ಮಳೆಯಾಗಿದೆ(Record rainfall) . 2019ರ ನಂತರ ಒಂದೇ ದಿನ 300 ಮಿ.ಮೀ ಮಳೆ ಸುರಿದಿದೆ. ಈ ಪರಿಸ್ಥಿತಿ ಇನ್ನೂ ಮುಂದುವರೆಯುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ(IMD) ರೆಡ್ ಅಲರ್ಟ್(Red Alert) ನೀಡಿದೆ. ವಾಣಿಜ್ಯ ನಗರಿಯಲ್ಲಿ ಮುಂಬೈನಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆಗಳು(Roads), ಹೆದ್ದಾರಿಗಳು(Highway) ಜಲಾವೃತವಾಗಿವೆ. ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ.
ಶಾಲಾ ಕಾಲೇಜುಗಳು ಬೆಳಗಿನ ತರಗತಿಗಳನ್ನು ರದ್ದು ಮಾಡಲಾಗಿದೆ. ಪರಿಸ್ಥಿತಿ ಅವಲೋಕಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ತಿಳಿಸಿದೆ. ಮಧ್ಯರಾತ್ರಿ 1ರಿಂದ ಬೆಳಗ್ಗೆ 7 ಗಂಟೆಯವರೆಗೆ ಅಂದರೆ ಆರು ತಾಸಿನಲ್ಲಿ ದಾಖಲೆಯ 300 ಎಂಎಂ ಮಳೆ ಸುರಿದಿದೆ. ಮುಂದಿನ ಎರಡು ದಿನಗಳ ಕಾಲವೂ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ಬಿಎಂಸಿ ತಿಳಿಸಿದೆ.
ದಹಿಸರ್, ಬೊರಿವಲಿ, ಕಾಂದಿವಲಿ, ಮಲಾಡ್, ಜೋಗೇಶ್ವರಿ, ಅಂಧೇರಿ, ಸಾಂತಾಕ್ರೂಜ್, ಸಿಯಾನ್, ವಡಾಲಾ, ಕುರ್ಲಾ, ಘಾಟ್‌ಕೋಪರ್, ಭಾಂಡೂಪ್ ಮತ್ತು ಥಾಣೆಯಲ್ಲಿ ಜೋರು ಮಳೆಯಿಂದಾಗಿ ಅನೇಕ ಮನೆಗಳು ಜಲಾವೃತಗೊಂಡಿವೆ. ಸೇತುವೆಯಲ್ಲಿ ಕೊಚ್ಚಿ ಹೋಗುತ್ತಿದ್ದ 54 ಜನರನ್ನು ರಕ್ಷಿಸಲಾಗಿದೆ. ವಿವಿಧ ಪ್ರದೇಶಗಳಲ್ಲಿ ಕನಿಷ್ಠ 275 ಮನೆಗಳು ಹಾನಿಗೊಳಗಾಗಿದ್ದು, ಸುಮಾರು 20 ವಾಹನಗಳು ಜಲಾವೃತವಾಗಿವೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.
– ಅಂತರ್ಜಾಲ ಮಾಹಿತಿ (ಐಎಎನ್ಎಸ್/ಪಿಟಿಐ)
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…