ರಾಜ್ಯದ ಹಲವು ಕಡೆಗಳಲ್ಲಿ ಭಾನುವಾರ ಸಂಜೆ ಮಳೆಯಾಗಿದೆ. ಆದರೆ ಈ ಬಾರಿ ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಿದೆ. ನಗರದ ಹಲವು ಕಡೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿತು.
ಬೆಂಗಳೂರು ನಗರದ ಶಾಂತಿನಗರ, , ಮೈಸೂರ್ ಬ್ಯಾಂಕ್ ಸರ್ಕಲ್, ಕೆಆರ್ ಮಾರ್ಕೆಟ್, ಡಬಲ್ ರೋಡ್, ಕಾರ್ಪೋರೇಷನ್ ಬಳಿ ಭರ್ಜರಿ ಮಳೆಯಾಗುತ್ತಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ವಾಹನ ಸಂಚಾರರು ಹರಸಾಹಸ ಪಟ್ಟರು. ಬೆಳಗ್ಗೆಯಿಂದಲೂ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿತ್ತು ಸಂಜೆ ವೇಳೆಗೆ ಗುಡುಗು ಸಿಡಿಲಿನ ಅಬ್ಬರದೊಂದಿಗೆ ಭಾರೀ ಮಳೆ ಸುರಿಯುತ್ತಿದೆ. 3 ದಿನಗಳ ಕಾಲ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಸಂಜೆಯ ಬಳಿ ಮಳೆಯ ಅಬ್ಬರ ಹೆಚ್ಚುತ್ತಿರುವುದರಿಂದ ರಾಜಕಾಲುವೆ, ತಗ್ಗು ಪ್ರದೇಶ ಜನರಿಗೆ ಎಚ್ಚರಿಕೆಯಿಂದ ಇರಲು ಸೂಚನೆ ನೀಡಲಾಗಿದೆ.
ಬೆಂಗಳೂರು ನಗರದಲ್ಲಿ ಈ ವರ್ಷ 1700 ಮಿಮೀ ಮಳೆಯಾಗಿದೆ. ಇದು ಇದುವರೆಗಿನ ದಾಖಲಾದ ಮಳೆಯಲ್ಲಿ ಅತಿ ಹೆಚ್ಚು ಮಳೆಯಾಗಿದೆ. 2017 ರಲ್ಲಿ ದಾಖಲಾದ 1696 ಮಿಮೀ ಸಾರ್ವಕಾಲಿಕ ದಾಖಲೆ ಮಳೆಯಾಗಿತ್ತು.