ಬೆಂಗಳೂರು ನಗರದಲ್ಲಿ ಧಾರಾಕಾರ ಮಳೆ | ಅನಿರೀಕ್ಷಿತ ಮಳೆಗೆ ಜನರು ತತ್ತರ | ಅಧಿಕಾರಿಗಳ ತಂಡದಿಂದ  ನಿರಂತರ ಪರಿಹಾರ ಕಾರ್ಯ | ಹಾನಿ ಪ್ರದೇಶಗಳಿಗೆ ಸಚಿವರ ಭೇಟಿ| ಮಳೆ ಹಾನಿಗೆ ಶೀಘ್ರ ಪರಿಹಾರದ ಭರವಸೆ |

October 22, 2024
10:43 PM
ಮಳೆಯಿಂದಾಗಿರುವ  ಅನಾಹುತಗಳಿಗೆ ಶೀಘ್ರ ಪರಿಹಾರ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಳೆ ಮುಂದುವರೆದಿದ್ದು, ಮಂಗಳವಾರ ಮುಂಜಾನೆಯಿಂದಲೇ ಆರಂಭವಾದ ಮಳೆಗೆ ನಗರದ ವಿವಿಧೆಡೆ ಜನರು ಪರದಾಡುವಂತಾಯಿತು. ಮಧ್ಯಾಹ್ನ 3 ಗಂಟೆ ಸುಮಾರಿಗೆ ಮತ್ತೆ ನಗರದ ಹಲವೆಡೆ ಧಾರಾಕಾರ ಮಳೆ ಶುರುವಾದ ಪರಿಣಾಮ ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ಪರದಾಡಿದ ದೃಶ್ಯಗಳು ಕಂಡುಬಂದವು. ಭಾರೀ ಮಳೆಯಿಂದ ಹಲವು ರಸ್ತೆಗಳು ಜಲಮಯವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿತು. ಆರ್. ಟಿ. ನಗರ, ಮಲ್ಲೇಶ್ವರಂ, ದಾಸರಹಳ್ಳಿ, ರಾಜಾಜಿನಗರ, ವಿಜಯನಗರ, ಮಂಜುನಾಥನಗರ, ಮೆಜೆಸ್ಟಿಕ್, ಕೆ. ಆರ್ ಮಾರುಕಟ್ಟೆ, ಎಂ. ಜಿ. ರಸ್ತೆ ಸೇರಿ ಹಲವೆಡೆ ಮಳೆಯಾಗಿದೆ. ರಾಜ್ಯದ ಹಲವು ಭಾಗಗಳಲ್ಲೂ ಮಳೆಯಾಗಿದ್ದು, ಜನರು ಪರದಾಡುವಂತಾಗಿದೆ.…..ಮುಂದೆ ಓದಿ….

Advertisement
Advertisement
Advertisement
Advertisement
Advertisement

ಬೆಂಗಳೂರಿನ ಮಳೆ ಪೀಡಿತ ಪ್ರದೇಶಗಳಲ್ಲಿ ಕಳೆದ 48 ಗಂಟೆಗಳಿಂದ  ಅಧಿಕಾರಿಗಳ ತಂಡ ನಿರಂತರವಾಗಿ ಪರಿಹಾರ ಕಾರ್ಯದಲ್ಲಿ ತೊಡಗಿದೆ.ಚೌಡೇಶ್ವರಿ ನಗರದಲ್ಲಿ ಅತ್ಯಧಿಕ 150 ಮಿಲೀ ಮೀಟರ್ ಮಳೆಯಾಗಿದೆ. ಇನ್ನು ಕೆಲವು ಕಡೆಗಳಲ್ಲಿ ವಾಡಿಕೆಗಿಂತ ಶೇಕಡ 300 ರಷ್ಟು ಹೆಚ್ಚಿನ ಮಳೆಯಾಗಿದೆ. ಯಲಹಂಕ ವಲಯ ವ್ಯಾಪ್ತಿಯಲ್ಲಿ ಮಳೆ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಕೂಡಲೇ ತುರ್ತು ಕ್ರಮಗಳನ್ನು ಕೈಗೊಂಡು ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Advertisement

ಅಧಿಕ ಸಮಸ್ಯೆಯಿರುವ ಕಡೆ ನಿವಾಸಿಗಳನ್ನು ಬೇರೆಡೆ ಸ್ಥಳಾಂತರಿಸಲು ಅಗತ್ಯ ಕ್ರಮ ಕೈಗೊಳ್ಳುವುದು. ಬಾಧಿತ ಪ್ರದೇಶಗಳಲ್ಲಿರುವ ನಿವಾಸಿಗಳಿಗೆ ಕುಡಿಯುವ ನೀರು, ಹಾಲು, ಬಿಸ್ಕೆಟ್, ಊಟದ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಸೂಚನೆ ನೀಡಿದರು.

ಭದ್ರಪ್ಪ ಲೇಔಟ್, ಟಾಟಾ ನಗರ ಸೇರಿದಂತೆ ಹೆಚ್ಚು ನೀರು ನಿಂತಿರುವ ಪ್ರದೇಶಗಳಲ್ಲಿ ನೀರನ್ನು ಹೊರ ಹಾಕುವಂತೆ ತಿಳಿಸಿದ್ದಾರೆ. ರಾಜಕಾಲುವೆಗಳ ಪ್ರಮುಖ ಸ್ಥಳಗಳಲ್ಲಿ ಜೆಸಿಬಿಗಳ ಮೂಲಕ ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಲು ಸೂಚಿಸಿದರು.  ಯಲಹಂಕ ವಲಯ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗಿರುವ ಕಾರಣ ಹೆಚ್ಚುವರಿ ಮೇಲ್ವಿಚಾರಣೆಗಾಗಿ ಪಾಲಿಕೆ ಇತರೆ ವಲಯಗಳ ಐ.ಎ.ಎಸ್, ಕೆ.ಎ.ಎಸ್ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ.

Advertisement

ಬೆಂಗಳೂರು ನಗರದಲ್ಲಿ ಧಾರಾಕಾರ ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ  ಕಂದಾಯ ಸಚಿವ ಕೃಷ್ಣಬೈರೇಗೌಡ ಭೇಟಿ ನೀಡಿ, ಪರಿಶೀಲನೆ ನಡೆಸಿದರು.ಟಾಟಾನಗರದ ಭದ್ರಪ್ಪ ಬಡಾವಣೆಗೆ ಭೇಟಿ ನೀಡಿದ ಅವರು  ಜಲಾವೃತಗೊಂಡಿರುವ ತಗ್ಗು ಪ್ರದೇಶಗಳಿಗೆ ಭೇಟಿ ನೀಡಿ, ಸ್ಥಳೀಯ ಸಮಸ್ಯೆಗಳ ಕುರಿತು ಆಲಿಸಿದರು.

ಮಳೆ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯ ಕೈಗೆತ್ತಿಕೊಳ್ಳಲು ಆದ್ಯತೆ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಳೆ ಬಾಧಿತ ಪ್ರದೇಶಗಳಲ್ಲಿ ಶಾಶ್ವತ ಪರಿಹಾರ ಕೈಗೆತ್ತಿಕೊಳ್ಳಲು ಸಮಿತಿ ರಚಿಸಲಾಗಿದೆ. ಸಮಿತಿ ವರದಿ ಬಂದ ನಂತರ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.ಅಧಿಕಾರಿಗಳು ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ, ಪರಿಹಾರ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ತಿಳಿಸಿದರು.

Advertisement

ಮಳೆಯಿಂದಾಗಿರುವ  ಅನಾಹುತಗಳಿಗೆ ಶೀಘ್ರ ಪರಿಹಾರ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಮಳೆ ಅನಾಹುತಗಳ ಕುರಿತು ನಿಗಾ ವಹಿಸಲಾಗಿದೆ. ಮಳೆಯಿಂದಾಗುವ ಹಾನಿ ತಡೆಗಟ್ಟಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು,   ಸ್ಥಳ ಸಮೀಕ್ಷೆ ಕೂಡ ನಡೆಯುತ್ತಿದೆ ಎಂದು ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಸ್ಸಾಂನಲ್ಲಿ ವಶಪಡಿಸಿಕೊಂಡ 60,000 ಕೆಜಿಗೂ ಹೆಚ್ಚು ಅಡಿಕೆಯ ಒಡೆಯರು ಯಾರು…? | ಅಧಿಕಾರಿಗಳಿಗೆ ತಲೆನೋವಾದ ಅಡಿಕೆ…! |
March 6, 2025
12:27 PM
by: The Rural Mirror ಸುದ್ದಿಜಾಲ
ಹೊಸರುಚಿ | ಗುಜ್ಜೆ ಕಟ್ಲೇಟ್
March 6, 2025
11:27 AM
by: ದಿವ್ಯ ಮಹೇಶ್
ಕುಂಭಮೇಳ | ಪ್ರಯಾಗ ತಲಪುವಾಗ ಸಂತಸವೇ ಸಂತಸ…
March 6, 2025
10:52 AM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ
ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ
March 4, 2025
10:11 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror