ಸೂಪಾ ಜಲಾಶಯದ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆ | ಪ್ರವಾಹದ ಮುನ್ಸೂಚನೆ | ಸುರಕ್ಷಿತ ಪ್ರದೇಶಕ್ಕೆ ತೆರಳುವಂತೆ ಜನರಿಗೆ ಕೆಪಿಸಿಎಲ್ ಮನವಿ

August 27, 2024
11:41 AM

ಸೋನೆ ಮಳೆಯ ಅಬ್ಬರ ಜೋರಾಗಿದ್ದು, ಕಾಳಿ ನದಿಗೆ(Kali River) ನಿರ್ಮಿಸಿರುವ ಸೂಪಾ ಜಲಾಶಯ(Supa Dam) ಗರಿಷ್ಠ ಮಟ್ಟ ತಲುಪುತ್ತಿದೆ. ಈ ಹಿನ್ನೆಲೆಯಲ್ಲಿ ಜಲಾಶಯದಿಂದ ಹೆಚ್ಚುವರಿ ನೀರು ಹೊರಬಿಡುವ ಸಾಧ್ಯತೆ ಇರುವ ಕಾರಣ, ಸುರಕ್ಷಿತ ಸ್ಥಳಕ್ಕೆ ಹೋಗುವಂತೆ ಅಣೆಕಟ್ಟೆಯ(Dam) ಕೆಳದಂಡೆಯಲ್ಲಿರುವ ಜನರಿಗೆ ಕೆಪಿಸಿಎಲ್(KPCL) ಮನವಿ ಮಾಡಿದೆ.

Advertisement
Advertisement

ಸೂಪಾ ಜಲಾಶಯದ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದೆ(Heavy Rain). ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆ, ಜಲಾಶಯದ ನೀರಿನ ಮಟ್ಟ ಸತತವಾಗಿ ಏರುತ್ತಲೇ ಇದೆ. ಜಲಾಶಯದ ಗರಿಷ್ಠ ಮಟ್ಟ 564 ಮೀಟರ್ ಆಗಿದ್ದು, ನೀರಿನ ಸಂಗ್ರಹಣಾ ಸಾಮರ್ಥ್ಯ 147.55 ಟಿಎಂಸಿ ಆಗಿದೆ. ಪ್ರಸ್ತುತ (ಆ. 25ರಂದು) 558.95 ಅಡಿಗೂ ಹೆಚ್ಚು ನೀರು ನಿಂತಿದ್ದು, 126.662 ಟಿಎಂಸಿ ನೀರು ಸಂಗ್ರಹವಾಗಿದೆ. ಅಲ್ಲದೆ, ಜಲಾಶಯದ ಒಳಹರಿವು 25,954 ಕ್ಯುಸೆಕ್ ಇದೆ.

ಇದೇ ರೀತಿ ಒಳಹರಿವು ಹೆಚ್ಚಾದರೆ ಜಲಾಶಯದ ನೀರಿನ ಮಟ್ವ ಗರಿಷ್ಠ ಮಟ್ಟ ತಲುಪುವ ಸಾಧ್ಯತೆ ಇದೆ. ಹಾಗಾಗಿ ಸುರಕ್ಷತೆ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಯಾವುದೇ ಸಮಯದಲ್ಲಿ ಅಣೆಕಟ್ಟಿನಿಂದ ಹೊರಬಿಡಬೇಕಾಗುವ  ಸಂದರ್ಭ ಎದುರಾಗಬಹುದು. ಆದ್ದರಿಂದ ಅಣೆಕಟ್ಟೆಯ ದಂಡೆಯಲ್ಲಿರುವ ಮತ್ತು ನದಿಯ ಪಾತ್ರದುದ್ದಕ್ಕೂ ಇರುವ ಸಾರ್ವಜನಿಕರು ತಮ್ಮ ಜನ, ಜಾನುವಾರು ಇತ್ಯಾದಿಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳಬೇಕು ಎಂದು ಕೆಪಿಸಿಎಲ್ ಮನವಿ ಮಾಡಿದೆ. ಅಲ್ಲದೆ, ಸೂಪಾ ಅಣೆಕಟ್ಟೆಯ ಕೆಳಭಾಗದ ನದಿ ಪಾತ್ರದಲ್ಲಿ ದೋಣಿ ಸಂಚಾರ, ಮೀನುಗಾರಿಕೆ, ಜಲ ಸಾಹಸ ಕ್ರೀಡೆಗಳು ಸೇರಿದಂತೆ ಇತರೆ ಚಟುವಟಿಕೆಗಳನ್ನು ಮಳೆಗಾಲ ಮುಗಿಯುವವರೆಗೂ ನಡೆಸಬಾರದು ಎಂದು ಇದೇ ವೇಳೆ ಕೋರಿದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಫಸಲ್ ಭೀಮಾ ಯೋಜನೆ ಹಣ ಬಿಡುಗಡೆ | ಕಲಬುರಗಿ ಜಿಲ್ಲೆಗೆ ಹೆಚ್ಚಿನ ಬೆಳೆ ವಿಮೆ
July 26, 2025
3:56 PM
by: The Rural Mirror ಸುದ್ದಿಜಾಲ
ಲಡಾಖ್‌ನ ದ್ರಾಸುದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ| ವೀರಯೋಧರಿಗೆ ಪಾದಯಾತ್ರೆ ಮೂಲಕ ಗೌರವ
July 26, 2025
3:16 PM
by: The Rural Mirror ಸುದ್ದಿಜಾಲ
ಬದುಕಿಗೆ ಧರ್ಮದ ತಳಹದಿ ಅಗತ್ಯ : ರಾಘವೇಶ್ವರ ಶ್ರೀ
July 26, 2025
2:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26-07-2025 | ಜುಲೈ ಅಂತ್ಯದವರೆಗೂ ಸಾಮಾನ್ಯ ಮಳೆ | ಕಾರಣ ಏನು ?
July 26, 2025
11:18 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group