ಸೋನೆ ಮಳೆಯ ಅಬ್ಬರ ಜೋರಾಗಿದ್ದು, ಕಾಳಿ ನದಿಗೆ(Kali River) ನಿರ್ಮಿಸಿರುವ ಸೂಪಾ ಜಲಾಶಯ(Supa Dam) ಗರಿಷ್ಠ ಮಟ್ಟ ತಲುಪುತ್ತಿದೆ. ಈ ಹಿನ್ನೆಲೆಯಲ್ಲಿ ಜಲಾಶಯದಿಂದ ಹೆಚ್ಚುವರಿ ನೀರು ಹೊರಬಿಡುವ ಸಾಧ್ಯತೆ ಇರುವ ಕಾರಣ, ಸುರಕ್ಷಿತ ಸ್ಥಳಕ್ಕೆ ಹೋಗುವಂತೆ ಅಣೆಕಟ್ಟೆಯ(Dam) ಕೆಳದಂಡೆಯಲ್ಲಿರುವ ಜನರಿಗೆ ಕೆಪಿಸಿಎಲ್(KPCL) ಮನವಿ ಮಾಡಿದೆ.
ಸೂಪಾ ಜಲಾಶಯದ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದೆ(Heavy Rain). ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆ, ಜಲಾಶಯದ ನೀರಿನ ಮಟ್ಟ ಸತತವಾಗಿ ಏರುತ್ತಲೇ ಇದೆ. ಜಲಾಶಯದ ಗರಿಷ್ಠ ಮಟ್ಟ 564 ಮೀಟರ್ ಆಗಿದ್ದು, ನೀರಿನ ಸಂಗ್ರಹಣಾ ಸಾಮರ್ಥ್ಯ 147.55 ಟಿಎಂಸಿ ಆಗಿದೆ. ಪ್ರಸ್ತುತ (ಆ. 25ರಂದು) 558.95 ಅಡಿಗೂ ಹೆಚ್ಚು ನೀರು ನಿಂತಿದ್ದು, 126.662 ಟಿಎಂಸಿ ನೀರು ಸಂಗ್ರಹವಾಗಿದೆ. ಅಲ್ಲದೆ, ಜಲಾಶಯದ ಒಳಹರಿವು 25,954 ಕ್ಯುಸೆಕ್ ಇದೆ.
ಇದೇ ರೀತಿ ಒಳಹರಿವು ಹೆಚ್ಚಾದರೆ ಜಲಾಶಯದ ನೀರಿನ ಮಟ್ವ ಗರಿಷ್ಠ ಮಟ್ಟ ತಲುಪುವ ಸಾಧ್ಯತೆ ಇದೆ. ಹಾಗಾಗಿ ಸುರಕ್ಷತೆ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಯಾವುದೇ ಸಮಯದಲ್ಲಿ ಅಣೆಕಟ್ಟಿನಿಂದ ಹೊರಬಿಡಬೇಕಾಗುವ ಸಂದರ್ಭ ಎದುರಾಗಬಹುದು. ಆದ್ದರಿಂದ ಅಣೆಕಟ್ಟೆಯ ದಂಡೆಯಲ್ಲಿರುವ ಮತ್ತು ನದಿಯ ಪಾತ್ರದುದ್ದಕ್ಕೂ ಇರುವ ಸಾರ್ವಜನಿಕರು ತಮ್ಮ ಜನ, ಜಾನುವಾರು ಇತ್ಯಾದಿಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳಬೇಕು ಎಂದು ಕೆಪಿಸಿಎಲ್ ಮನವಿ ಮಾಡಿದೆ. ಅಲ್ಲದೆ, ಸೂಪಾ ಅಣೆಕಟ್ಟೆಯ ಕೆಳಭಾಗದ ನದಿ ಪಾತ್ರದಲ್ಲಿ ದೋಣಿ ಸಂಚಾರ, ಮೀನುಗಾರಿಕೆ, ಜಲ ಸಾಹಸ ಕ್ರೀಡೆಗಳು ಸೇರಿದಂತೆ ಇತರೆ ಚಟುವಟಿಕೆಗಳನ್ನು ಮಳೆಗಾಲ ಮುಗಿಯುವವರೆಗೂ ನಡೆಸಬಾರದು ಎಂದು ಇದೇ ವೇಳೆ ಕೋರಿದೆ.
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…