Advertisement
MIRROR FOCUS

ಕಾವೇರಿ, ಕಲ್ಯಾಣ ಕರ್ನಾಟಕದಲ್ಲಿ ಉತ್ತಮ ಮಳೆ | ಜಲಾಶಯಗಳಿಗೆ ಹರಿದುಬರುತ್ತಿರುವ ನೀರು |

Share

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ(Mansoon Rain). ರೈತರು(Farmers) ಮೊಗದಲ್ಲಿ ಮಂದಹಾಸ ಮೂಡಿದೆ. ರಾಜ್ಯದ ಅಣೆಕಟ್ಟುಗಳಿಗೆ(Dam) ನೀರು ಹರಿದು ಬರುತ್ತಿದ್ದು, ಕೃಷಿ ಚಟುವಟೆಕೆಗಳಿಗೆ( ಲಾಭವಾಗುತ್ತಿದೆ. ಕಲ್ಯಾಣ ಕರ್ನಾಟಕದ (Kalyana Karnataka Rains) ಚಿಂಚೊಳ್ಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ನಾಗರಾಳ‌ ಬಳಿ ಇರುವ  ಮುಲ್ಲಾಮಾರಿ ಜಲಾಶಯದ ಒಳಹರಿವು ಹೆಚ್ಚಳವಾಗುತ್ತಿದೆ. ಇತ್ತ ಕೆಆರ್‌ಎಸ್ ಜಲಾಶಯಕ್ಕೆ(KRS Dam) 2404 ಕ್ಯೂಸೆಕ್‌ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ 454 ಕ್ಯೂಸೆಕ್‌ ನೀರನ್ನು ಹೊರ ಬೀಡಲಾಗುತ್ತಿದೆ.

ಮುಲ್ಲಾಮಾರಿ ಕೆಳದಂಡೆ ಜಲಾಶಯದ ಕನಿಷ್ಟ 490 ಮೀಟರ್ ಆಗಿದ್ದು, ಗರಿಷ್ಠ ಮಟ್ಟ491 ಮೀಟರ್ ಆಗಿದ್ದು, 1500 ಕ್ಯೂಸೆಕ್ ಒಳ‌ಹರಿವು ಹೆಚ್ಚಳವಾಗಿದೆ. ಯಾವುದೇ ಕ್ಷಣದಲ್ಲಿ ಮುಲ್ಲಾಮಾರಿ ಕೆಳದಂಡೆ ಜಲಾಶಯದ ನೀರನ್ನು ಬಿಡುಗಡೆ ಮಾಡುವ ಸಾಧ್ಯತೆಯಿದ್ದು, ಮುಲ್ಲಾಮಾರಿ ಕೆಡದಂಡೆ ಗ್ರಾಮಗಳಿಗೆ ಎಚ್ಚರಿಕೆಯಿಂದ ಇರಲು ಸೂಚನೆ ನೀಡಲಾಗಿದೆ.

ಈ ಎಲ್ಲ ಗ್ರಾಮಗಳ ನಾಗರಿಕರಿಗೆ ಎಚ್ಚರಿಕೆಯಿಂದಿರಲು ಸೂಚನೆ : ಈ ಭಾಗದ ಚಿಮ್ಮನಚೋಡ,ತಾಜಲಾಪುರ, ಗಾರಂಪಳ್ಳಿ, ಸೇರಿ ಹಲವು ಗ್ರಾಮಗಳ ನಾಗರಿಕರಿಗೆ ನದಿ‌ ದಡದಲ್ಲಿ ಹೋಗದಂತೆ ಎಚ್ಚರಿಕೆಯಿಂದಿರಲು ಎಇ‌ ಸೂಚನೆ ನೀಡಿದ್ದಾರೆ.

ಇತ್ತ ಮೈಸೂರು ಪ್ರಾಂತ್ಯದಲ್ಲೂ ಉತ್ತಮ ಮಳೆ : ರಾಜ್ಯದ ಹಲವೆಡೆ ಮಳೆ ಮುಂದುವರೆದಿದೆ. ಕರ್ನಾಟಕದ ಕಾಶ್ಮೀರ ಎಂದೇ ಹೆಸರುವಾಸಿಯಾದ ಕೊಡಗು ಜಿಲ್ಲೆಯಲ್ಲಿ (Kodagu Rains) ಕಳೆದ ಕೆಲ ದಿನಗಳಿಂದ ಉತ್ತಮ ಮಳೆಯಾಗುತ್ತಿರುವ ಪರಿಣಾಮ ಕಾವೇರಿ ಕೊಳ್ಳದ ಜಲಾಶಯಗಳ ನೀರಿನ ಮಟ್ಟ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಜಲಾಶಯಕ್ಕೆ ದಿನದಿಂದ ದಿನಕ್ಕೆ ನೀರಿನ ಮಟ್ಟ ಹಾಗೂ ಒಳ ಹರಿವಿನ ಪ್ರಮಾಣವು ಹೆಚ್ಚಾಗುತ್ತಿದೆ. 124.80 ಅಡಿಗಳ ಸಾಮರ್ಥ್ಯವಿರುವ ಜಲಾಶಯದ ಇಂದಿನ ಮಟ್ಟ 86.20 ಅಡಿಗಳಾಗಿದ್ದು ಒಂದು ದಿನಕ್ಕೆ ಒಂದು ಅಡಿಗೂ ಹೆಚ್ಚು ಜಲಾಶಯದ ನೀರಿನ ಪ್ರಮಾಣ ಹೆಚ್ಚಳವಾಗಿದೆ. ಕೆಆರ್‌ಎಸ್ ಜಲಾಶಯಕ್ಕೆ 2404 ಕ್ಯೂಸೆಕ್‌ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ 454 ಕ್ಯೂಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ.

ಕಬಿನಿ ಜಲಾಶಯದ ಇಂದಿನ ಸ್ಥಿತಿಗತಿ : ಎಚ್‌ಡಿ ಕೋಟೆಯ ಕಬಿನಿ ಜಲಾಶಯಕ್ಕೆ ನೀರಿನ ಒಳಹರಿವು ಕಳೆದ ಎರಡು ದಿನಗಳಿಗೆ ಹೋಲಿಸಿದರೆ ಇಂದು ಕಡಿಮೆಯಾಗಿದೆ. 2284 ಅಡಿಗಳ ಸಾಮರ್ಥ್ಯವಿರುವ ಜಲಾಶಯದ ಇಂದಿನ ಮಟ್ಟ 2263.38 ಅಡಿಗಳಾಗಿದ್ದು, ಜಲಾಶಯಕ್ಕೆ 1825 ಕ್ಯೂಸೆಕ್‌ ನೀರು ಒಳ ಹರಿವಿದ್ದರೆ ಜಲಾಶಯದಿಂದ 300 ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗುತ್ತಿದೆ. ಮೊನ್ನೆ (ಜೂನ್ 12) ಜಲಾಶಯಕ್ಕೆ ಭರ್ಜರಿ ಒಳಹರಿವು ಇತ್ತು. ಆದರೆ ಕಳೆದ ಎರಡು ದಿನಗಳಿಂದ ಒಳ ಹರಿವಿನ ಪ್ರಮಾಣದಲ್ಲಿ ಕಡಿಮೆಯಾಗುತ್ತಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

6 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

7 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

7 hours ago

ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ

ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…

15 hours ago

2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ

2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…

19 hours ago

ರೈತರ ಹಿತಕ್ಕಾಗಿ ಎರಡು ಮಹತ್ವದ ಸುಧಾರಣೆಗಳು | ಹೊಸ ಬೀಜ ಕಾಯ್ದೆ, ಪರಿಷ್ಕೃತ ಕೀಟನಾಶಕ ಕಾಯ್ದೆ ಜಾರಿಗೆ ಕೇಂದ್ರ ಸಿದ್ಧತೆ

ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…

19 hours ago