Advertisement
ಪ್ರಮುಖ

#HeavyRain | ದ.ಕ ಜಿಲ್ಲೆಯಲ್ಲಿ ಭಾರೀ ಮಳೆ | ಮಹಿಳೆ ಬಲಿ | ಸಾವಿನ ಸಂಖ್ಯೆ 5ಕ್ಕೆ ಏರಿಕೆ |

Share

ಕರಾವಳಿಯಾದ್ಯಂತ ವರುಣನ #Rain ಆರ್ಭಟ ಜೋರಾಗುತ್ತಿದೆ. ಕಳೆದ ಮೂರು ದಿನಗಳಿಂದ ಎಡೆಬಿಡದೆ ನಿರಂತರ ಮಳೆ ಸುರಿಯುತ್ತಿದೆ.  ಜೊತೆಗೆ ಅಲ್ಲಿಲ್ಲಿ ಅಪಾರ ಹಾನಿ ಉಂಟಾಗಿದ್ದು ಅಲ್ಲದೆ, ಐವರು ಪ್ರಾಣವನ್ನು ಕಳೆದುಕೊಂಡಿದ್ದಾರೆ. ದಕ್ಷಿಣ ಕನ್ನಡ #DakshinaKannada ಜಿಲ್ಲೆಯಲ್ಲಿ ಈ ಬಾರಿಯ ಭೀಕರ ಮಳೆಗೆ 5ನೇ ಸಾವಾಗಿದೆ. ಗುಡ್ಡ ಕುಸಿದು ಮನೆಯೊಳಗೆ ಸಿಲುಕಿದ್ದ ಇಬ್ಬರು ಮಹಿಳೆಯರಲ್ಲಿ ಒಬ್ಬರು ಮೃತಪಟ್ಟಿದ್ದಾರೆ.  

ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದ ನಂದಾವರದಲ್ಲಿ ನಡೆದಿದೆ. ಮನೆಯ ಮೇಲೆ ಗುಡ್ಡ ಕುಸಿದ ಪರಿಣಾಮ ಇಬ್ಬರು ಮಹಿಳೆಯರು ಮನೆಯೊಳಗೆ ಸಿಲುಕಿಕೊಂಡಿದ್ದರು.

ಘಟನೆ ಬಳಿಕ ಸ್ಥಳಕ್ಕಾಗಮಿಸಿದ ಬಂಟ್ವಾಳ ಅಗ್ನಿಶಾಮಕ ಅಧಿಕಾರಿಗಳು, ಪೊಲೀಸರು ಹಾಗೂ ಸ್ಥಳೀಯರು ಕಾರ್ಯಾಚರಣೆ ನಡೆಸಿ ಓರ್ವ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ಆದರೆ ಮನೆಯೊಳಗೆ ಸಿಲುಕಿದ್ದ ಝರೀನಾ (46) ಸಾವನ್ನಪ್ಪಿದ್ದು, ಅವರ ಮೃತದೇಹವನ್ನು ಹೊರತೆಗೆಯಲಾಗಿದೆ. ಝರೀನಾ ಪುತ್ರಿ ಶಫಾ (20) ಅವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಈ ಬಾರಿಯ ಮಳೆಗೆ ದ.ಕ ಜಿಲ್ಲೆಗೆ ಇದು 5ನೇ ಬಲಿಯಾಗಿದೆ. ಸ್ಥಳಕ್ಕೆ ಬಂಟ್ವಾಳ ತಹಶೀಲ್ದಾರ್ ಎಸ್‌ಬಿ ಕೂಡಲಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

4 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

1 day ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

1 day ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago