ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ | 500 ಕ್ಕೂ ಅಧಿಕ ರಸ್ತೆಗಳು ಬಂದ್‌ – 298 ಮಂದಿ ಬಲಿ |

August 26, 2025
2:43 PM

ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ ಮತ್ತು ಭೂಕುಸಿತ ಉಂಟಾಗಿದ್ದು, 484 ರಸ್ತೆಗಳು ಸಂಪರ್ಕ ಕಡಿತಗೊಂಡಿದೆ. ರಾಜ್ಯವು ನಿರಂತರ ಭಾರೀ ಮಳೆಯನ್ನು ಎದುರಿಸುತ್ತಿದೆ,  298 ಕ್ಕೂ ಹೆಚ್ಚು ಜನರು ಭಾರೀ ಮಳೆಗೆ ಇದುವರೆಗೆ ಬಲಿಯಾಗಿದ್ದಾರೆ ಎಂದು ವರದಿಯಾಗಿವೆ. ಕಳೆದ ಕೆಲವು ದಿನಗಳಿಂದ ಶಾಲೆಗಳಿಗೂ ರಜೆ ನೀಡಲಾಗಿದೆ. ಆಗಸ್ಟ್ 30 ರವರೆಗೂ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.

ಕುಲ್ಲುವಿನ ಸೈನ್ಜ್ ಕಣಿವೆಯಲ್ಲಿ, ಗರ್ಶಾಲಾ ನಾಲಾ ಉಕ್ಕಿ ಹರಿದು ಸ್ಥಳೀಯ ಮನೆಗಳಿಗೆ ಹೂಳು ಮತ್ತು ಮಣ್ಣುಗಳಿಂದ ಆವೃತವಾಗಿದೆ. ಹೀಗಾಗಿ ಸಾರ್ವಜನಿಕರಿಗೆ ಸಮಸ್ಯೆಯಾಗಿದೆ.  ಕಾಂಗ್ರಾದ ಇಂಡೋರಾದಲ್ಲಿ, ಪಂಜಾಬ್‌ನ ಪಠಾಣ್‌ಕೋಟ್ ಬಳಿ ಬಿಯಾಸ್ ನದಿ ಉಕ್ಕಿ ಹರಿಯುತ್ತಿದ್ದು, ರಸ್ತೆಗಳು ಮತ್ತು ಮನೆಗಳಿಗೆ ನೀರು ನುಗ್ಗಿದೆ.

ಶಿಮ್ಲಾದ ಹವಾಮಾನ ಇಲಾಖೆಯು 10 ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆಯ ಜೊತೆಗೆ ಆರೆಂಜ್‌ ಎಲರ್ಟ್‌ ನೀಡಿದೆ.  ಇದುವರೆಗೆ 298 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ಬಗ್ಗೆ ವರದಿಯಾಗಿವೆ, 500 ಮಾರ್ಗಗಳನ್ನು ನಿರ್ಬಂಧಿಸಲಾಗಿದೆ ಮತ್ತು ವಿದ್ಯುತ್ ಕಡಿತ ಮುಂದುವರೆದಿದೆ. ಆಗಸ್ಟ್ 26 ರಂದು ಹೆಚ್ಚಿದ ಮಳೆಯ ಕಾರಣದಿಂದ ಮತ್ತಷ್ಟು ಸಮಸ್ಯೆಯಾಗುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಅಕ್ರಮ ಆಮದು ಜಾಲದ ಮೇಲೆ ಇಡಿ ದಾಳಿ – 16 ಕಡೆ ಶೋಧ, ನೂರಾರು ಕೋಟಿ ಹಣದ ವಹಿವಾಟಿನ ತನಿಖೆ
October 1, 2026
8:30 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-10-2026 | ಕರ್ನಾಟಕದಲ್ಲಿ ಮತ್ತೆ ಮಳೆ ಇಳಿಕೆ – ಕಾರಣವೇನು?
October 1, 2026
1:10 PM
by: ಸಾಯಿಶೇಖರ್ ಕರಿಕಳ
ಹೊಸ ಅಡಿಕೆ ಧಾರಣೆ 350 ಫಿಕ್ಸ್ – ಆರಂಭಿಕ ಧಾರಣೆಯೇ ಆಮದು ದರಕ್ಕಿಂತ ಕಡಿಮೆ..!
October 1, 2026
12:44 PM
by: ದ ರೂರಲ್ ಮಿರರ್.ಕಾಂ
ರಿಲಯನ್ಸ್ ಫೌಂಡೇಶನ್ ಪದವಿ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
October 1, 2026
7:48 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror