ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ ಮತ್ತು ಭೂಕುಸಿತ ಉಂಟಾಗಿದ್ದು, 484 ರಸ್ತೆಗಳು ಸಂಪರ್ಕ ಕಡಿತಗೊಂಡಿದೆ. ರಾಜ್ಯವು ನಿರಂತರ ಭಾರೀ ಮಳೆಯನ್ನು ಎದುರಿಸುತ್ತಿದೆ, 298 ಕ್ಕೂ ಹೆಚ್ಚು ಜನರು ಭಾರೀ ಮಳೆಗೆ ಇದುವರೆಗೆ ಬಲಿಯಾಗಿದ್ದಾರೆ ಎಂದು ವರದಿಯಾಗಿವೆ. ಕಳೆದ ಕೆಲವು ದಿನಗಳಿಂದ ಶಾಲೆಗಳಿಗೂ ರಜೆ ನೀಡಲಾಗಿದೆ. ಆಗಸ್ಟ್ 30 ರವರೆಗೂ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.
ಕುಲ್ಲುವಿನ ಸೈನ್ಜ್ ಕಣಿವೆಯಲ್ಲಿ, ಗರ್ಶಾಲಾ ನಾಲಾ ಉಕ್ಕಿ ಹರಿದು ಸ್ಥಳೀಯ ಮನೆಗಳಿಗೆ ಹೂಳು ಮತ್ತು ಮಣ್ಣುಗಳಿಂದ ಆವೃತವಾಗಿದೆ. ಹೀಗಾಗಿ ಸಾರ್ವಜನಿಕರಿಗೆ ಸಮಸ್ಯೆಯಾಗಿದೆ. ಕಾಂಗ್ರಾದ ಇಂಡೋರಾದಲ್ಲಿ, ಪಂಜಾಬ್‌ನ ಪಠಾಣ್‌ಕೋಟ್ ಬಳಿ ಬಿಯಾಸ್ ನದಿ ಉಕ್ಕಿ ಹರಿಯುತ್ತಿದ್ದು, ರಸ್ತೆಗಳು ಮತ್ತು ಮನೆಗಳಿಗೆ ನೀರು ನುಗ್ಗಿದೆ.
ಶಿಮ್ಲಾದ ಹವಾಮಾನ ಇಲಾಖೆಯು 10 ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆಯ ಜೊತೆಗೆ ಆರೆಂಜ್ ಎಲರ್ಟ್ ನೀಡಿದೆ. ಇದುವರೆಗೆ 298 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ಬಗ್ಗೆ ವರದಿಯಾಗಿವೆ, 500 ಮಾರ್ಗಗಳನ್ನು ನಿರ್ಬಂಧಿಸಲಾಗಿದೆ ಮತ್ತು ವಿದ್ಯುತ್ ಕಡಿತ ಮುಂದುವರೆದಿದೆ. ಆಗಸ್ಟ್ 26 ರಂದು ಹೆಚ್ಚಿದ ಮಳೆಯ ಕಾರಣದಿಂದ ಮತ್ತಷ್ಟು ಸಮಸ್ಯೆಯಾಗುವ ಸಾಧ್ಯತೆ ಇದೆ.
ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…
ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…
ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…
ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…