Advertisement
MIRROR FOCUS

ಜಮ್ಮು ಕಾಶ್ಮೀರದ ಕಥುವಾದಲ್ಲಿ ಭಾರೀ ಮಳೆ | ಪ್ರವಾಹಕ್ಕೆ ಏಳು ಮಂದಿ ಬಲಿ

Share

ಜಮ್ಮು ಕಾಶ್ಮೀರದ ಕಥುವಾದಲ್ಲಿ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು ಏಳು ಜನ ಮೃತಪಟ್ಟಿದ್ದಾರೆ.  ರಾಷ್ಟ್ರೀಯ ಹೆದ್ದಾರಿಗಳು, ರೈಲ್ವೆ ಮಾರ್ಗಗಳಲ್ಲಿ ನೀರು ನಿಂತಿದ್ದು ಭಾರೀ ಹಾನಿಯಾಗಿದೆ. ಕೆಲವೆಡೆ ಭೂ ಕುಸಿತದಿಂದ ಜನಜೀವನ ಅಸ್ತವ್ಯಸ್ತವಾಗಿದೆ. ತ್ವರಿತವಾಗಿ ರಕ್ಷಣಾ ಪಡೆಗಳು ಸ್ಥಳಕ್ಕಾಗಮಿಸಿದ್ದು ಕಾರ್ಯಾಚರಣೆಯಲ್ಲಿ ತೊಡಗಿವೆ. ಆದರೆ ಭಾರೀ ಮಳೆಗೆ ರಸ್ತೆಗಳು ಕುಸಿದು, ಕೊಚ್ಚಿಹೋಗಿದ್ದು ರಕ್ಷಣಾ ಪಡೆಗಳ ಕಾರ್ಯಾಚರಣೆಗೂ ಅಡ್ಡಿಯಾಗಿದೆ. ಕಿಶ್ತವಾರ್ ನಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರೆದಿದ್ದು, ಮೃತ ಪಟ್ಟವರ ಸಂಖ್ಯೆ 58ಕ್ಕೇರಿದೆ.

ಅತ್ಯಾಧುನಿಕ ಯಂತ್ರೋಪಕರಣಗಳನ್ನು ಉಪಯೋಗಿಸಿ ಯುದ್ಧೋಪಾದಿಯಲ್ಲಿ ರಕ್ಷಣಾ ಕಾರ್ಯ  ಸಾಗುತ್ತಿದೆ. ಚಸೋತಿ ಗ್ರಾಮದಲ್ಲಿ ಉಕ್ಕಿ ಹರಿಯುತ್ತಿರುವ ನದಿಯ ಮೇಲೆ ತಾತ್ಕಾಲಿಕ ಸೇತುವೆ ನಿರ್ಮಿಸಿ ರಕ್ಷಣಾ ಪಡೆಗಳು ಮತ್ತು ಸ್ವಯಂಸೇವಕರು ಜನರನ್ನು ರಕ್ಷಿಸುತ್ತಿದ್ದಾರೆ.  75ಕ್ಕೂ ಅಧಿಕ ಮಂದಿ ನಾಪತ್ತೆಯಾಗಿರುವ ವರದಿಯಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಹಿಮಾಚಲ ಪ್ರದೇಶ ಕುಲು ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆ ಮತ್ತು ಭೂಕುಸಿತದಿಂದ ಮಂಡೀ- ಮನಾಲಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು ರಸ್ತೆಗಳೆಲ್ಲಾ ಕೆಸರುಮಯವಾಗಿವೆ. ಮಹಾರಾಷ್ಟ್ರದಲ್ಲೂ ಮಳೆ ಮುಂದುವರೆಯುತ್ತಿದ್ದು, ಮುಂದಿನ 7 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು ಸಂಬಂಧಿತ ಇಲಾಖೆಗಳಿಗೆ ಅಲರ್ಟ್ ಆಗಿರುವಂತೆ ಸೂಚಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

6 hours ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

6 hours ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

1 day ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago