ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ | KRS ಸಂಪೂರ್ಣ ಭರ್ತಿ ಸಾಧ್ಯತೆ

July 20, 2024
11:30 AM

ರಾಜ್ಯದಾದ್ಯಂತ ವರುಣ ಅಬ್ಬರಿಸಿದ್ದಾನೆ. ಕಳೆದ ವರ್ಷ ಮುಂಗಾರು ಕೀಣಿಸಿತ್ತು. ಆದರೆ ಈ ವರ್ಷ ಉತ್ತಮ ಮಳೆಯಾಗಿದೆ. ಕೊಡಗು ಜಿಲ್ಲೆಯಾದ್ಯಂತ ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆ ಕೆಆರ್‌ಎಸ್ ಜಲಾಶಯ ಬಹುತೇಕ ಭರ್ತಿಯಾಗುವ ಹಂತ ತಲುಪಿದ್ದು, ಜಲಾಶಯದ ಮಟ್ಟ 120 ಅಡಿಗೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಸಂದರ್ಭದಲ್ಲಿ ನದಿಗೆ ಹೆಚ್ಚಿನ ಪ್ರಮಾಣದ ನೀರು ಹರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಸದ್ಯ ಡ್ಯಾಂಗೆ 51,374 ಕ್ಯುಸೆಕ್ ಒಳಹರಿವು ಬರುತ್ತಿದೆ.

ಕೆಆರ್‌ಎಸ್ ಡ್ಯಾಂ ಭರ್ತಿಯ ಅಂಚಿನಲ್ಲಿರುವ ಹಿನ್ನೆಲೆ ಡ್ಯಾಂನಿಂದ ಕಾವೇರಿ ನದಿಗೆ (Cauvery River) 10,000 ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. ಕೆಆರ್‌ಎಸ್ ಡ್ಯಾಂನ 10 ಗೇಟ್‌ಗಳ ಮೂಲಕ 10,000 ಕ್ಯುಸೆಕ್‌ಗೂ ಅಧಿಕ ನೀರು ಹರಿಸಲಾಗಿದೆ. ಡ್ಯಾಂನಿಂದ ನೀರು ಹಾಲ್ನೊರೆಯಂತೆ ರಭಸವಾಗಿ ಬಂಡೆಗಳಿಗೆ ಅಪ್ಪಳಿಸಿ ಭೋರ್ಗರೆದು ಕಾವೇರಿ ನದಿಗೆ ಹರಿಯುತ್ತಿದೆ. ಈ ಹೊರಹರಿವಿನ ಪ್ರಮಾಣ ಯಾವ ಕ್ಷಣದಲ್ಲಾದರೂ ಹೆಚ್ಚಬಹುದು. ಹೀಗಾಗಿ ನದಿ ಪಾತ್ರದ ಜನರಿಗೆ ಮಂಡ್ಯ ಜಿಲ್ಲಾಡಳಿತ ಅಲರ್ಟ್ ಘೋಷಣೆ ಮಾಡಿದೆ. ಇನ್ನೂ ಕೆಆರ್‌ಎಸ್ ಡ್ಯಾಂ ಭರ್ತಿಯ ಅಂಚಿನಲ್ಲಿರುವ ಹಿನ್ನೆಲೆ ರೈತರಲ್ಲಿ ಸಂತಸ ಮನೆ ಮಾಡಿದೆ. 

  • ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ
ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ
October 16, 2026
3:13 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ
October 16, 2026
2:48 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror