ರಾಜ್ಯದಾದ್ಯಂತ ವರುಣ ಅಬ್ಬರಿಸಿದ್ದಾನೆ. ಕಳೆದ ವರ್ಷ ಮುಂಗಾರು ಕೀಣಿಸಿತ್ತು. ಆದರೆ ಈ ವರ್ಷ ಉತ್ತಮ ಮಳೆಯಾಗಿದೆ. ಕೊಡಗು ಜಿಲ್ಲೆಯಾದ್ಯಂತ ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆ ಕೆಆರ್‌ಎಸ್ ಜಲಾಶಯ ಬಹುತೇಕ ಭರ್ತಿಯಾಗುವ ಹಂತ ತಲುಪಿದ್ದು, ಜಲಾಶಯದ ಮಟ್ಟ 120 ಅಡಿಗೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಸಂದರ್ಭದಲ್ಲಿ ನದಿಗೆ ಹೆಚ್ಚಿನ ಪ್ರಮಾಣದ ನೀರು ಹರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಸದ್ಯ ಡ್ಯಾಂಗೆ 51,374 ಕ್ಯುಸೆಕ್ ಒಳಹರಿವು ಬರುತ್ತಿದೆ.
- ಅಂತರ್ಜಾಲ ಮಾಹಿತಿ