Advertisement
ಸುದ್ದಿಗಳು

ಕೇರಳ ಮತ್ತು ಅಸ್ಸಾಂನಲ್ಲಿ ಭಾರಿ ಮಳೆ, ದೆಹಲಿ ಮಾನ್ಸೂನ್ ವಿಳಂಬ

Share

ದೇಶದ ಹೆಚ್ಚಿನ ಭಾಗಗಳಲ್ಲಿ ಮುಂಗಾರು ಮಳೆ ವೇಗವಾಗಿ ಹರಡಿದರೂ  ರಾಷ್ಟ್ರೀಯ ರಾಜಧಾನಿ ದೆಹಲಿಗೆ ವಿಳಂಬವಾಗಿದೆ.  ನಿರೀಕ್ಷಿತ ದಿನಕ್ಕಿಂತ 2-3 ದಿನ ವಿಳಂಬವಾಗುತ್ತಿದೆ. ಈ ನಡುವೆ  ವಾಯುವ್ಯ ಮತ್ತು ಈಶಾನ್ಯ ಭಾರತದ ಕೆಲವು ಭಾಗಗಳಲ್ಲಿ ಭಾರೀ ಮಳೆ ಮುಂದುವರೆದಿದೆ.

ರಾಷ್ಟ್ರೀಯ ರಾಜಧಾನಿ ದೆಹಲಿಗೆ ಮುಂಗಾರು ಮಳೆ ವಿಳಂಬವಾಗಿದ್ದು ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಸಾಮಾನ್ಯವಾಗಿ ಜೂನ್ 27 ರ ವೇಳೆಗೆ ದೆಹಲಿಯನ್ನು ತಲುಪುವ ಮುಂಗಾರು ಈ ಬಾರಿ  ಪಶ್ಚಿಮ ರಾಜಸ್ಥಾನವನ್ನು ಆವರಿಸಲು ಈಗ ಇನ್ನೂ 2-3 ದಿನಗಳನ್ನು ತೆಗೆದುಕೊಳ್ಳುವ ನಿರೀಕ್ಷೆಯಿದೆ. ಹೀಗಾಗಿ ದೆಹಲಿಗೂ ವಿಳಂಬವಾಗುತ್ತಿದೆ. ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ವಾಯುವ್ಯ ಭಾರತದ ದೊಡ್ಡ ಪ್ರದೇಶಗಳಲ್ಲಿ ಮುಂಗಾರು ಈಗಾಗಲೇ ಆರಂಭವಾಗಿದ್ದರೂ ವಿಳಂಬವಾಗಿದೆ. ದೇಶದ ಇತರೆಡೆಗಳಲ್ಲಿ, ಕೇರಳ, ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಅಸ್ಸಾಂನಲ್ಲಿ ಭಾರೀ ಮಳೆಯಾಗುತ್ತಿದೆ.ಗುಜರಾತ್, ಉತ್ತರಾಖಂಡ, ಮಹಾರಾಷ್ಟ್ರ ಮತ್ತು ಕೇರಳದ ಕೆಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ನೀಡಿದೆ. ಕೇರಳದ ಐದು ಜಿಲ್ಲೆಗಳಾದ ಪತನಂತಿಟ್ಟ, ಕೊಟ್ಟಾಯಂ, ಇಡುಕ್ಕಿ, ಮಲಪ್ಪುರಂ ಮತ್ತು ವಯನಾಡ್‌ನಲ್ಲಿ ಆರೆಂಜ್‌ ಅಲರ್ಟ್‌ ಇದೆ. ಕೇರಳದ ಇಡುಕ್ಕಿ ಜಿಲ್ಲೆಯ ತಗ್ಗು ಪ್ರದೇಶಗಳಲ್ಲಿ ವಾಸಿಸುವ 3,220 ಜನರನ್ನು ಸ್ಥಳಾಂತರಿಸಲು ಅಧಿಕಾರಿಗಳು ವ್ಯವಸ್ಥೆ ಮಾಡಿದ್ದಾರೆ.

ಉತ್ತರಾಖಂಡದಲ್ಲಿ, ನಿರಂತರ ಭಾರೀ ಮಳೆಯಿಂದಾಗಿ ನಂದಪ್ರಯಾಗ ಮತ್ತು ಭನೇರೋಪಾನಿ ಬಳಿಯ ಬದರಿನಾಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿದೆ. ರುದ್ರಪ್ರಯಾಗದಲ್ಲಿ ನಡೆದ ಬಸ್ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿದ್ದು, ಶುಕ್ರವಾರ ಅಲಕನಂದಾ ನದಿಯಲ್ಲಿ ಮತ್ತೊಂದು ಮೃತದೇಹ ಪತ್ತೆಯಾಗಿದೆ. ಬದರಿನಾಥಕ್ಕೆ 20 ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ರಸ್ತೆಯಿಂದ ಹೊರಟು ಘೋಲ್ತಿರ್ ಬಳಿಯ ಅಲಕನಂದಾ ನದಿಗೆ ಉರುಳಿದೆ.

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ 53 ರಸ್ತೆಗಳು ಬಂದ್‌ ಆಗಿವೆ. ಈ ಮಾರ್ಗಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ.ಕುಲ್ಲುವಿನಲ್ಲಿ 23, ಮಂಡಿಯಲ್ಲಿ 16, ಲಹೌಲ್ ಮತ್ತು ಸ್ಪಿಟಿಯಲ್ಲಿ ಏಳು, ಉನಾದಲ್ಲಿ ನಾಲ್ಕು ಮತ್ತು ಸಿರ್ಮೌರ್ ಜಿಲ್ಲೆಗಳಲ್ಲಿ ಮೂರು ರಸ್ತೆಗಳು ಸಂಚಾರ ನಿರ್ಬಂಧಿಸಲ್ಪಟ್ಟಿವೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.

ಮುಂದಿನ ಏಳು ದಿನಗಳಲ್ಲಿ ಕೊಂಕಣ ಮತ್ತು ಗೋವಾ, ಮಧ್ಯ ಮಹಾರಾಷ್ಟ್ರ ಮತ್ತು ಗುಜರಾತ್‌ನ ಘಾಟ್‌ಗಳು ಸೇರಿದಂತೆ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ .

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

4 hours ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

1 day ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

1 day ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

1 day ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

1 day ago

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

3 days ago