ಕರಾವಳಿ ಹಾಗೂ ರಾಜ್ಯದ ಹಲವೆಡೆ ಧಾರಾಕಾರ ಮಳೆ |

June 13, 2025
7:35 AM

ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ ಭಟ್ಕಳ ತಾಲೂಕುಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಿರಂತರ ಮಳೆಗೆ ಕಾರವಾರದ ಮುಖ್ಯ ರಸ್ತೆಗಳಲ್ಲಿ ನೀರು ನಿಂತು ಜನ, ವಾಹನ ಸಂಚಾರಕ್ಕೆ ಅಡಚಣೆಯುಂಟಾಗಿದೆ.…… ಮುಂದೆ ಓದಿ……

Advertisement

ಕರಾವಳಿ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಗಾಳಿ ಸಹಿತ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯ ಮಲೆನಾಡು ಭಾಗದ ಕೆಲವೆಡೆ ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು ವಿದ್ಯುತ್ ಸಮಸ್ಯೆ ಉಂಟಾಗಿದೆ.

ದಾವಣಗೆರೆ ಜಿಲ್ಲಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಜನಜೀವನ ಬಾಧಿತಗೊಂಡಿದೆ.  ಗದಗ ಜಿಲ್ಲೆಯ ಬೆಣ್ಣೆಹಳ್ಳದ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಯಾವಗಲ್ ಗ್ರಾಮದ ರೈತರು ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ಈರುಳ್ಳಿ, ಶೇಂಗಾ, ಹೆಸರು ಮತ್ತು ಮೆಣಸಿನಕಾಯಿ ಬೆಳೆಗಳು ಜಲಾವೃತಗೊಂಡಿವೆ.

ಧಾರವಾಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಕಾರಣ ಗ್ರಾಮೀಣ ಭಾಗದಲ್ಲೂ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಯಮನೂರ ಗ್ರಾಮದಲ್ಲಿ ಸಾಕಷ್ಟು ಮನೆಗಳಿಗೆ ನೀರು  ನುಗ್ಗಿದೆ. ದಾವಣಗೆರೆ ಜಿಲ್ಲಾದ್ಯಂತ ವ್ಯಾಪಕ ಮಳೆಯಿಂದಾಗಿ ಕೃಷಿ ಚಟುವಟಿಕೆಗಳು ಸ್ಥಗಿತಗೊಂಡಿವೆ. ಈ ಮಧ್ಯೆ ಮಲೇಬೆನ್ನೂರು ಸಮೀಪದ ಕೊಮಾರನಹಳ್ಳಿಯಲ್ಲಿ ಸಿಡಿಲು ಬಡಿದ ಪರಿಣಾಮ ಕೊಟ್ಟಿಗೆಯಲ್ಲಿದ್ದ ನಾಲ್ಕು ಹಸುಗಳು ಸಾವನ್ನಪ್ಪಿವೆ. ಹಲವೆಡೆ ಸುರಿದ ಮಳೆಯಿಂದಾಗಿ ತರಕಾರಿ ಮತ್ತು ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದೆ.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಮತ್ತು ರೋಣ ತಾಲೂಕಿನಲ್ಲಿ ಮಳೆಯಾಗಿದೆ. ಬೆಣ್ಣೆಹಳ್ಳದ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಯಾವಗಲ್ ಗ್ರಾಮದ ರೈತರು ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ಈರುಳ್ಳಿ, ಶೇಂಗಾ, ಹೆಸರು ಮತ್ತು ಮೆಣಸಿನಕಾಯಿ ಬೆಳೆಗಳು ಜಲಾವೃತಗೊಂಡಿವೆ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೇಶದಾದ್ಯಂತ ಸಾಮಾನ್ಯ ಮಳೆ | ಮಲೆನಾಡು-ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ
July 16, 2025
7:51 AM
by: ದ ರೂರಲ್ ಮಿರರ್.ಕಾಂ
ಆರೋಗ್ಯದಲ್ಲಿ ಈ ರಾಶಿಯವರಿಗೆ ದೀರ್ಘಕಾಲದ ಕಾಯಿಲೆಯಿಂದ ಚೇತರಿಕೆ
July 16, 2025
7:17 AM
by: ದ ರೂರಲ್ ಮಿರರ್.ಕಾಂ
ಭೂಮಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ
July 15, 2025
9:39 PM
by: ದ ರೂರಲ್ ಮಿರರ್.ಕಾಂ
ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮ
July 15, 2025
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror