ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ ಭಟ್ಕಳ ತಾಲೂಕುಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಿರಂತರ ಮಳೆಗೆ ಕಾರವಾರದ ಮುಖ್ಯ ರಸ್ತೆಗಳಲ್ಲಿ ನೀರು ನಿಂತು ಜನ, ವಾಹನ ಸಂಚಾರಕ್ಕೆ ಅಡಚಣೆಯುಂಟಾಗಿದೆ.…… ಮುಂದೆ ಓದಿ……
ಕರಾವಳಿ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಗಾಳಿ ಸಹಿತ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯ ಮಲೆನಾಡು ಭಾಗದ ಕೆಲವೆಡೆ ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು ವಿದ್ಯುತ್ ಸಮಸ್ಯೆ ಉಂಟಾಗಿದೆ.
ದಾವಣಗೆರೆ ಜಿಲ್ಲಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಜನಜೀವನ ಬಾಧಿತಗೊಂಡಿದೆ. ಗದಗ ಜಿಲ್ಲೆಯ ಬೆಣ್ಣೆಹಳ್ಳದ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಯಾವಗಲ್ ಗ್ರಾಮದ ರೈತರು ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ಈರುಳ್ಳಿ, ಶೇಂಗಾ, ಹೆಸರು ಮತ್ತು ಮೆಣಸಿನಕಾಯಿ ಬೆಳೆಗಳು ಜಲಾವೃತಗೊಂಡಿವೆ.
ಧಾರವಾಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಕಾರಣ ಗ್ರಾಮೀಣ ಭಾಗದಲ್ಲೂ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಯಮನೂರ ಗ್ರಾಮದಲ್ಲಿ ಸಾಕಷ್ಟು ಮನೆಗಳಿಗೆ ನೀರು ನುಗ್ಗಿದೆ. ದಾವಣಗೆರೆ ಜಿಲ್ಲಾದ್ಯಂತ ವ್ಯಾಪಕ ಮಳೆಯಿಂದಾಗಿ ಕೃಷಿ ಚಟುವಟಿಕೆಗಳು ಸ್ಥಗಿತಗೊಂಡಿವೆ. ಈ ಮಧ್ಯೆ ಮಲೇಬೆನ್ನೂರು ಸಮೀಪದ ಕೊಮಾರನಹಳ್ಳಿಯಲ್ಲಿ ಸಿಡಿಲು ಬಡಿದ ಪರಿಣಾಮ ಕೊಟ್ಟಿಗೆಯಲ್ಲಿದ್ದ ನಾಲ್ಕು ಹಸುಗಳು ಸಾವನ್ನಪ್ಪಿವೆ. ಹಲವೆಡೆ ಸುರಿದ ಮಳೆಯಿಂದಾಗಿ ತರಕಾರಿ ಮತ್ತು ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದೆ.
ಗದಗ ಜಿಲ್ಲೆಯ ಲಕ್ಷ್ಮೇಶ್ವರ ಮತ್ತು ರೋಣ ತಾಲೂಕಿನಲ್ಲಿ ಮಳೆಯಾಗಿದೆ. ಬೆಣ್ಣೆಹಳ್ಳದ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಯಾವಗಲ್ ಗ್ರಾಮದ ರೈತರು ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ಈರುಳ್ಳಿ, ಶೇಂಗಾ, ಹೆಸರು ಮತ್ತು ಮೆಣಸಿನಕಾಯಿ ಬೆಳೆಗಳು ಜಲಾವೃತಗೊಂಡಿವೆ.
12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…
ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…
ಚೀನಾದ Chinese Academy of Tropical Agricultural Sciences (CATAS) ವಿಜ್ಞಾನಿಗಳು Electron…
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…
ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…