Advertisement
MIRROR FOCUS

ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆ | ಮಳೆಗೆ ಎಲ್ಲೆಲ್ಲಿ ಏನೇನಾಯ್ತು…? |

Share

ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಮುಲ್ಕಿಯಲ್ಲಿ 30 ಸೆಂಟಿಮೀಟರ್, ಭಾಗಮಂಡಲದಲ್ಲಿ11 ಸೆಂಟಿಮೀಟರ್ ಮಳೆಯಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಇದೇ 23 ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಉತ್ತರ ಒಳನಾಡಿನಲ್ಲಿಯೂ ಮಳೆಯಾಗಲಿದೆ. ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಇದೇ 21 ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿಯೂ 21 ರವರೆಗೆ ಹಗುರದಿಂದ ಮಳೆಯಾಗಲಿದೆ.

ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ನಿರಂತರ ಮಳೆ ಸುರಿಯುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ.ಲಕ್ಷ್ಮಿ ಪ್ರಿಯ ಆದೇಶಿಸಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಬಿರುಸುಗೊಂಡಿದೆ. ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು ಇಂದು ಕೂಡ ಮುಂದುವರಿದಿದೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಕಾರಣ ಮುಂಜಾಗ್ರತಾ ಕ್ರಮವಾಗಿ  ಜಿಲ್ಲೆಯ ಎಲ್ಲಾ ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.  ಜನತೆ ನದಿ ಮತ್ತು ಕಡಲ ತೀರದತ್ತ ತೆರಳದೆ ಎಚ್ಚರಿಕೆ ವಹಿಸಬೇಕು. ಮೀನುಗಾರರು ಯಾವುದೇ ಕಾರಣಕ್ಕೂ ಮೀನುಗಾರಿಕೆಗೆ ತೆರಳಬಾರದು ಎಂದು  ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಮುನ್ನೆಚ್ಚರಿಕೆ ನೀಡಿದ್ದಾರೆ. ಈ ನಡುವೆ ಮಳೆಯಿಂದ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ  ನೀಡಿ ಪರಿಶೀಲನೆ ನಡೆಸಿದರು.

ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ಜಿಲ್ಲೆಯ ಎಲ್ಲಾ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿತ್ತು.  ಉಡುಪಿ ಜಿಲ್ಲೆಯ ಗಂಗೊಳ್ಳಿಯಲ್ಲಿ ಮೀನುಗಾರಿಕೆಗೆ ತೆರಳಿ ದೋಣಿ ಮುಗುಚಿ ನಾಪತ್ತೆಯಾಗಿದ್ದ ಮೂವರು ಮೀನುಗಾರರ ನಿಧನಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಂತಾಪ ಸೂಚಿಸಿದ್ದಾರೆ. ಸರ್ಕಾರದಿಂದ ನಿಯಮಾನುಸಾರ ಪರಿಹಾರ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಕೊಪ್ಪಳ ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿದ್ದು, ಕಳೆದ ರಾತ್ರಿ ಮನೆ ಗೋಡೆ ಕುಸಿದು 2 ವರ್ಷದ ಬಾಲಕಿ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ, ನೈಸರ್ಗಿಕ ವಿಕೋಪ ಪರಿಹಾರ ನಿಧಿಯಿಂದ 5 ಲಕ್ಷ ಪರಿಹಾರ ಘೋಷಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

18 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

23 hours ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

1 day ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

1 day ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

2 days ago