ಪಂಜಾಬ್ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಮಳೆ ಹಾಗೂ ಪ್ರವಾಹದಿಂದ ಉಂಟಾದ ನಷ್ಟದ ಕುರಿತಂತೆ ವರದಿಯನ್ನು ಪ್ರಧಾನಿ ಅವರಿಗೆ ಸಲ್ಲಿಸುವುದಾಗಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ಪ್ರವಾಹ ಬಾಧಿತ ಪಂಜಾಬ್ ಗೆ ಭೇಟಿ ನೀಡಿದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಪ್ರವಾಹದಿಂದ ಸಾಕಷ್ಟು ಹಾನಿಯಾಗಿದೆ. ಬಾಧಿತ ಪ್ರದೇಶಗಳ ಪುನರ್ ನಿರ್ಮಾಣಕ್ಕಾಗಿ ಅಲ್ಪಾವಧಿ, ಮಧ್ಯಮಾವಧಿ ಮತ್ತು ದೀರ್ಘಾವಧಿ ಯೋಜನೆಗಳ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದಾರೆ. ಅಕ್ರಮ ಗಣಿಗಾರಿಕೆಯಿಂದ ರಾಜ್ಯದ ಸಟ್ಲೆಜ್, ಬಿಯಾಸ್, ರಾವಿ ಮತ್ತು ಘಗ್ಗರ್ ನದಿಗಳ ದಡದಲ್ಲಿರುವ ಒಡ್ಡುಗಳು ದುರ್ಬಲಗೊಂಡಿವೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮತ್ತು ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅವರ ಆಡಳಿತಾವಧಿಯಲ್ಲಿ ಬೆಳೆಗಳನ್ನು ಪ್ರವಾಹದಿಂದ ರಕ್ಷಿಸಲು ಇವುಗಳನ್ನು ಬಲಪಡಿಸಲಾಗಿತ್ತು. ಆದರೀಗ ಇವುಗಳಿಗೆ ಹಾನಿಯಾಗಿದೆ. ಭವಿಷ್ಯದಲ್ಲಿ ಪಂಜಾಬ್ ಅನ್ನು ಇಂತಹ ದುರಂತಗಳಿಂದ ರಕ್ಷಿಸಲು ಇವುಗಳನ್ನು ಬಲಪಡಿಸುವುದು ಅಗತ್ಯವಾಗಿದೆ. ಕೇಂದ್ರದಿಂದ ಪಂಜಾಬ್ ಗೆ ಅಗತ್ಯ ನೆರವು ನೀಡುವುದಾಗಿ ಇದೇ ವೇಳೆ ಸಚಿವರು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…
Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…
ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…
ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…