ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ | ನೂರಾರು ಗ್ರಾಮಗಳು ಜಲಾವೃತ, ಬೆಳೆ ನಷ್ಟ | 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರು |

June 3, 2025
11:08 PM

ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ, ಸಿಕ್ಕಿಂ, ಅಸ್ಸಾಂ, ಮೇಘಾಲಯ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ನೂರಾರು ಗ್ರಾಮಗಳು ಜಲಾವೃತಗೊಂಡಿವೆ. ಪ್ರವಾಹಗಳಿಂದ ಬೆಳೆಗಳಿಗೆ ನಷ್ಟವಾಗಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ತುಂಬಿದೆ.  ಎನ್ ಡಿಆರ್ ಎಫ್, ಎಸ್ ಡಿ ಆರ್ ಎಫ್, ವಾಯುಪಡೆ, ಸೇರಿದಂತೆ ರಕ್ಷಣಾ ತಂಡಗಳು ರಕ್ಷಣಾ ಮತ್ತು ಪರಿಹಾರ ಕಾರ್ಯಗಳಲ್ಲಿ ತೊಡಗಿವೆ.

ಅಸ್ಸಾಂನಲ್ಲಿ ಕಳೆದ 24 ಗಂಟೆಗಳಲ್ಲಿ ಪ್ರವಾಹ ಪರಿಸ್ಥಿತಿ ತೀವ್ರವಾಗಿದ್ದು, ಹೆಚ್ಚುವರಿ 5 ಜಿಲ್ಲೆಗಳಿಗೆ ವ್ಯಾಪಿಸಿದೆ.  ರಾಜ್ಯದ 22 ಜಿಲ್ಲೆಗಳಲ್ಲಿ 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರಾಗಿದ್ದಾರೆ. ಪ್ರವಾಹದಿಂದ 65 ಕಂದಾಯ ವಲಯಗಳ 1 ಸಾವಿರದ 150 ಗ್ರಾಮಗಳು ಬಾಧಿತವಾಗಿದ್ದು, 12 ಸಾವಿರದ 600 ಹೆಕ್ಟೇರ್ ನಲ್ಲಿ ಬೆಳೆ ನಷ್ಟವಾಗಿದೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿಯವರು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಮತ್ತು ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಪ್ರವಾಹ ಪರಿಸ್ಥಿತಿ ಕುರಿತು ಮಾಹಿತಿ ಪಡೆದಿದ್ದಾರೆ.  ಪ್ರವಾಹಬಾಧಿತ ರಾಜ್ಯಗಳಲ್ಲಿ ಪರಿಹಾರ ಮತ್ತು ಪುನರ್ವಸತಿ ಕಾರ್ಯಗಳಿಗೆ ಕೇಂದ್ರದಿಂದ ಎಲ್ಲ ನೆರವು ಒದಗಿಸುವ ಭರವಸೆಯನ್ನು ನೀಡಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ
August 22, 2026
2:07 PM
by: ಸಾಯಿಶೇಖರ್ ಕರಿಕಳ
ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ
August 22, 2026
6:47 AM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ
August 21, 2026
7:49 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ
August 21, 2026
4:04 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror