ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ, ಸಿಕ್ಕಿಂ, ಅಸ್ಸಾಂ, ಮೇಘಾಲಯ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ನೂರಾರು ಗ್ರಾಮಗಳು ಜಲಾವೃತಗೊಂಡಿವೆ. ಪ್ರವಾಹಗಳಿಂದ ಬೆಳೆಗಳಿಗೆ ನಷ್ಟವಾಗಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ತುಂಬಿದೆ. ಎನ್ ಡಿಆರ್ ಎಫ್, ಎಸ್ ಡಿ ಆರ್ ಎಫ್, ವಾಯುಪಡೆ, ಸೇರಿದಂತೆ ರಕ್ಷಣಾ ತಂಡಗಳು ರಕ್ಷಣಾ ಮತ್ತು ಪರಿಹಾರ ಕಾರ್ಯಗಳಲ್ಲಿ ತೊಡಗಿವೆ.
ಅಸ್ಸಾಂನಲ್ಲಿ ಕಳೆದ 24 ಗಂಟೆಗಳಲ್ಲಿ ಪ್ರವಾಹ ಪರಿಸ್ಥಿತಿ ತೀವ್ರವಾಗಿದ್ದು, ಹೆಚ್ಚುವರಿ 5 ಜಿಲ್ಲೆಗಳಿಗೆ ವ್ಯಾಪಿಸಿದೆ. ರಾಜ್ಯದ 22 ಜಿಲ್ಲೆಗಳಲ್ಲಿ 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರಾಗಿದ್ದಾರೆ. ಪ್ರವಾಹದಿಂದ 65 ಕಂದಾಯ ವಲಯಗಳ 1 ಸಾವಿರದ 150 ಗ್ರಾಮಗಳು ಬಾಧಿತವಾಗಿದ್ದು, 12 ಸಾವಿರದ 600 ಹೆಕ್ಟೇರ್ ನಲ್ಲಿ ಬೆಳೆ ನಷ್ಟವಾಗಿದೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿಯವರು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಮತ್ತು ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಪ್ರವಾಹ ಪರಿಸ್ಥಿತಿ ಕುರಿತು ಮಾಹಿತಿ ಪಡೆದಿದ್ದಾರೆ. ಪ್ರವಾಹಬಾಧಿತ ರಾಜ್ಯಗಳಲ್ಲಿ ಪರಿಹಾರ ಮತ್ತು ಪುನರ್ವಸತಿ ಕಾರ್ಯಗಳಿಗೆ ಕೇಂದ್ರದಿಂದ ಎಲ್ಲ ನೆರವು ಒದಗಿಸುವ ಭರವಸೆಯನ್ನು ನೀಡಿದ್ದಾರೆ.
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…