ರಾಜ್ಯದ ವಿವಿಧೆಡೆ ಅಬ್ಬರದ ಮಳೆ | ದ ಕ ಜಿಲ್ಲೆಯಲ್ಲಿ 7 ಮನೆಗಳಿಗೆ ಹಾನಿ | ಮುರಿದು ಬಿದ್ದ 237 ವಿದ್ಯುತ್ ಕಂಬಗಳು |

May 26, 2025
10:35 PM
ಚಿಕ್ಕಮಗಳೂರು ಜಿಲ್ಲೆಯ ಕಳಸ, ಮೂಡಿಗೆರೆ, ಶೃಂಗೇರಿ, ಕೂಪ್ಪ ಹಾಗು ಎನ್.ಆರ್ ಪುರ ತಾಲೂಕಿನ ಅಂಗನವಾಡಿಗಳೀಗೆ ಇಂದಿನಿಂದ 28 ರವರೆಗೆ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ.

ರಾಜ್ಯದೆಲ್ಲೆಡೆ ಧಾರಾಕಾರ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ.  ಕೊಡಗು ಜಿಲ್ಲೆಯಾದ್ಯಂತ ನಿರಂತರವಾಗಿ ಧಾರಾಕಾರ ಮಳೆಯಾಗುತ್ತಿದ್ದು ಮಡಿಕೇರಿ ತಲಕಾವೇರಿ ಭಾಗಮಂಡಲ ಸೇರಿದಂತೆ ಜಿಲ್ಲೆಯ ಪ್ರಮುಖ ಪಟ್ಟಣಗಳಲ್ಲಿ ಸಾಮಾನ್ಯ ಜನಜೀವನ ವ್ಯತ್ಯಯವಾಗಿದೆ.ಕೊಡಗಿನಲ್ಲಿ ಕಾಲೇಜು, ಅಂಗನವಾಡಿಗೆ ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸ, ಮೂಡಿಗೆರೆ, ಶೃಂಗೇರಿ, ಕೂಪ್ಪ ಹಾಗು ಎನ್.ಆರ್ ಪುರ ತಾಲೂಕಿನ ಅಂಗನವಾಡಿಗಳೀಗೆ ಇಂದಿನಿಂದ 28 ರವರೆಗೆ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ.

Advertisement

ಚಿಕ್ಕಮಗಳೂರು ನಗರ, ಮೂಡಿಗೆರೆ, ಕೊಟ್ಟಿಗೆಹಾರ, ಕಳಸ ಸೇರಿ ಹಲವೆಡೆ  ರಸ್ತೆಗಳ ಮೇಲೆ ನೀರು ಹರಿಯುತ್ತಿದೆ.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಬಿರುಸುಗೊಂಡಿದೆ.  ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಲಾಗಿದೆ.  ದ ಕ ಜಿಲ್ಲೆಯಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಭಾರೀ ಗಾಳಿ ಮಳೆಯ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆಯಿಂದ ಇದುವರೆಗೆ 7 ಮನೆಗಳಿಗೆ ಭಾಗಶಃ ಹಾನಿ ಸಂಭವಿಸಿದೆ. ಒಟ್ಟು 237 ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು,  2 ಟ್ರಾನ್ಸ್‌ಫಾರ್ಮರ್‌ಗಳಿಗೆ ಹಾನಿಯಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.  ಸಮುದ್ರ ಹಾಗೂ ನದಿ ತಟದಲ್ಲಿ ವಾಸಿಸುತ್ತಿರುವ ಜನರನ್ನು ಅಗತ್ಯಬಿದ್ದರೆ ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳಾಂತರಿಸಬೇಕು. ಜನರ ಅನುಕೂಲಕ್ಕಾಗಿ ಕಾಳಜಿ ಕೇಂದ್ರಗಳನ್ನು ತೆಗೆಯಬೇಕು. ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೇತುವಿನ ಕಾಟ: ಈ ರಾಶಿಗಳಿಗೆ ಆರೋಗ್ಯದಲ್ಲಿ ಎಚ್ಚರಿಕೆ ಬೇಕು..!
July 11, 2025
7:33 AM
by: ದ ರೂರಲ್ ಮಿರರ್.ಕಾಂ
ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ
July 11, 2025
7:22 AM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿ
July 11, 2025
7:14 AM
by: The Rural Mirror ಸುದ್ದಿಜಾಲ
ರಾಜ್ಯದ 10 ಜಿಲ್ಲೆಯಲ್ಲಿ ಶ್ರಮಿಕ, ತಾತ್ಕಾಲಿಕ ವಸತಿ ಸಮುಚ್ಛಯ ನಿರ್ಮಿಸಲು ನಿರ್ಧಾರ
July 11, 2025
7:11 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror